01 – ಪವಿತ್ರ ಬೈಬಲ್
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಪವಿತ್ರ ಬೈಬಲ್.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಪವಿತ್ರ ಬೈಬಲ್.
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
”ನಿಮಗೆ ಸತ್ಯವಾಗಿ ಹೇಳುತ್ತೇನೆ,ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
”ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
”ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
”ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
”ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
”ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ.
”ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು. ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
”ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
”ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
”ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ. ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
”ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
”ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.
”ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
”ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು. ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.
”ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
”ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
”ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.
”ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ, ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
”ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.
”ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು. ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು. ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.
”ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ. ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ, ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.
”ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
”ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ. ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
”ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
”ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.
”“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
”ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
”ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
”“ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”
”ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು.
”ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
”ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
”“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ. ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
”ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
”ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
”ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು. ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು. ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
”ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ. ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ.
”ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
”“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
”ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
”ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
”ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.
”ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
”ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
”ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು, “ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು? ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು. ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.
”ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
”ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ. ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,
”ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
”ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
”ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ. ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
”ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
”ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
”ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
”ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ. ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
”ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
”ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
”ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
”ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
”ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
”ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
”ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.
”ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
”ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ. ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು! ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.
”ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.
”ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
”ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.
”ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ, ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.
”ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
”ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.
”ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
”ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
”ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
”ಆಲೆಫ್. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.
”ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.
”ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
”ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
”ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
”ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.
”ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
”ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.
”ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.
”ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.
”ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.
”ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.
”ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೊಳ್ಳುವೆನು.
”ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ, ಅವು ನನಗೆ ಇಷ್ಟವಾಗಿವೆ.
”ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.
”ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.
”ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
”ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.
”ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.
”ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.
”ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
”ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್.
”ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ, ನನ್ನ ದಾರಿಗೆ ಬೆಳಕೂ ಆಗಿದೆ.
”ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್.
”ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
”ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
”ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
”ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.
”ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,
”ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
”ನಿನ್ನ ನೀತಿಯು ನಿತ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.
”ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.
”ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್.
”ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
”ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
”ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.
”ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ.
”ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
”“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
”ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು. ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು. ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
”ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು; ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
”ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
”ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
”ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ, ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ. ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
”ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು. ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
”ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ. ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು. ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.
”ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
”ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
”ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.
”ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
”ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
”ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
”ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
”ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
”ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ. ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
”ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
”ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
”ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
”ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
”ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು. ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು. ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ. ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ. ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
”ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.
”ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
”ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
”ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
”ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
”ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.
”ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
”ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.” ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.
”ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ. ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
”ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
”ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು. ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
”ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
”ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
”ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
”ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
”ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.
”“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.
”ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
”ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
”ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
”ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ, ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ, ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
”ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
”ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ. ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.
”ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ. ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
”“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
”ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.
”ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
”ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!
”ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
”“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು. ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು. “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
”ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.
”“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. ನಿಮಗೆ ಸತ್ಯವಾಗಿ ಹೇಳುತ್ತೇನೆ,ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
”“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನುದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
”“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
”“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
”“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ. ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು. ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
”ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
”“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
”ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ;ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
”ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
”ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ. ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ. “ಆದರೆ ನೀವು ಧನ್ಯರು ಏಕೆಂದರೆನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ. ನಿಮಗೆ ಸತ್ಯವಾಗಿ ಹೇಳುತ್ತೇನೆ.ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. “ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ. ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು. ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
”ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.
”ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
”ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ,‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
”ಇದಲ್ಲದೆರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
”ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
”ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
”ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು, “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
”ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.” “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.” ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. “ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
”ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
”ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
”ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು? ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.
”ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
”ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
”ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
”ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
”ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
”ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
”ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.
”ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
”“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು. ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”
”ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ. ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ. ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು. ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು. ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು. ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
”ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
”ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.
”ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು. ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು. ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು. ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.
”ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
”ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
”“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
”“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
”ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು, ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
”ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
”ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,
”ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
”ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.
”ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
”ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
”ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
”ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
”“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
”ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
”ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
”ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
”ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
”ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ. ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.
”ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
”ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.
”ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.
”ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ. ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ. ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ. ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ? ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.
”ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.
”ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
”ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ
”ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
”ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ. ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ, “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ. ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು. ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
”ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
”ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.
”ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
”“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
”ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
”ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
”ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
”ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.
”ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
”ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
”ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
”ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
”ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
”ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
”ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
”ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ. ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು. ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
”ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು. ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
”ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು, ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;
”ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ. ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ, ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು. ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
”ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು? ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ. ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ. ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
”ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
”ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
”ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
”ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
”ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
”ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ. ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
”“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
”ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
”ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
”ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
”ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.
”ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ. ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು. ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.
”ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.
”ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.
”ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!
”ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?
”ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ. ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ. ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ? ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ?
”ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ. ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು. ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
”ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.
”ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,
”ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.
”ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.
”ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.
”ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
”ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ. ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
”ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
”ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
”ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?
”ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,
”ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
”ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
”ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.
”ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,
”ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
”ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
”ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
”ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.
”ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
”ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.
”ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
”ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
”ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು. ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ, ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
”ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ. ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
”ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ. ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
”ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
”ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
”ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
”ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.
”ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
”ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
”ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
”ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
”ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.
”ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.
”ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ. ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
”ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
”ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.
”ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,
”ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
”ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
”ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ. ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು. ಆದ್ದರಿಂದ, ನಾನು ಈ ಸಂತತಿಯವರ ಮೇಲೆ ಬಹಳ ಬೇಸರಗೊಂಡು, ‘ಅವರು ಯಾವಾಗಲೂ ತಪ್ಪಿಹೋಗುವ ಹೃದಯವುಳ್ಳವರೂ, ಅವರು ನನ್ನ ಮಾರ್ಗಗಳನ್ನು ತಿಳಿಯದವರೂ’ ಎಂದು ನಾನು ಹೇಳಿದೆ. ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’” ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.
”ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.
”ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
”ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು, ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.
”‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.
”“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
”ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
”ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
”ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
”ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
”ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
”ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
”ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
”ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
”ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.
”ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು” ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
”ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
”ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
”ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
”ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ. ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
”ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.
”ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
”ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
”ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
”ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
”ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
”ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
”ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.
”ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
”“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನುಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
”ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು.
”ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.
”ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು, ಸಮುದ್ರ ತೀರದ ಮರಳಿನ ಮೇಲೆ ನಿಂತನು.
”ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
”ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
”ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.
”ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
”ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
”ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
”