06 – ನರಕ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ನರಕ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ನರಕ.
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
”ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
”ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
”ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು. ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”
”ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.
”ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
”ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.
”ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?
”ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.
”ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.
”ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
”ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ. ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
”ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.
”ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
”ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.
”ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.
”ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
”ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು. ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
”ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
”ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.
”ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.
”ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.
”ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು. ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
”ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.
”ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ. ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
”ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು. ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
”ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ. ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
”ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು. ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು. ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು. ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ. ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
”ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
”ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ. ಅವರೆಲ್ಲರು ನಿನ್ನನ್ನು ಕುರಿತು, ‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು. ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.
”ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ! ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು. ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ! ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
”ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.
”ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
”ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
”ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.
”ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು. ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.
”“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
”ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
”ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
”ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು. ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.
”ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
”“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
”ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
”ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
”ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
”“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು,ಅಗ್ನಿ ನರಕಕ್ಕೆ ಗುರಿಯಾಗುವನು.
”ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
”“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
”ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
”“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
”ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.
”ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
”ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ. ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
”ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆರಾಜ್ಯದ ಮಕ್ಕಳು. ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
”ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
”ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.
”ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು? ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
”ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
”ಆದರೆನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
”ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
”ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
”ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
”ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
”ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
”ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
”“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
”ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
”ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
”ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
”ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ. ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
”ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
”ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
”ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು. ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.
”ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
”ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
”ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
”ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
”ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ. ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು. ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
”“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು. ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು. ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು. ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು. ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು, ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
”“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
”ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
”ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
”ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
”ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.
”ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
”ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ, ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು. ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
”ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ. ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
”ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
”ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
”ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
”ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
”ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ. ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
”ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.
”ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
”ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
”ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
”ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ. ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
”ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು. ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.
”ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.
”ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು. ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
”ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
”ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
”ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
”ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
”ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
”ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
”ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.
”ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು. ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.
”ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
”ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.
”ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
”ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.
”ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.
”ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.
”ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು. ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.
”ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು. “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.
”ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ, ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.
”ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು. ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
”ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ, ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.
”ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
”ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.
”ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು. ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
”ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
”ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
”ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”
”ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
”