07 – ತೀರ್ಪು ದಿನ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ತೀರ್ಪು ದಿನ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ತೀರ್ಪು ದಿನ.
ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
”ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
”ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
”ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
”ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
”ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.
”ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
”ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.
”ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
”ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು. ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ. ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ, ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”
”ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?
”ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!
”ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
”ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
”ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.
”ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
”ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ. ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
”ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ
”ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
”ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
”ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
”ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
”ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
”ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
”ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
”ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
”ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.
”ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
”ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ. ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
”ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
”ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
”ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
”ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
”ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು. ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
”ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
”“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
”“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು. ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ. “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
”ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
”“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
”ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
”ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
”ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು. ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು. ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
”“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು. ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
”ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.
”ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.
”ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
”ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
”ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
”ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
”ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
”“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
”ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ? ಹಾಗೆಯೇಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
”“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
”ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
”ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
”ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.
”ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
”ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆರಾಜ್ಯದ ಮಕ್ಕಳು. ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
”“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ. ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
”ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
”ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು? ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
”ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
”“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
”ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
”ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?
”ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
”“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
”ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
”“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. ಅದಕ್ಕೆ ಉತ್ತರವಾಗಿ ಅರಸನು,‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
”ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
”ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.
”ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
”ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ. ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
”ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
”ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
”ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು. ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು. “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
”ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
”ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ. ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ. ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು. ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
”ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
”ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ, “ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
”ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
”“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
”ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
”ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
”ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
”“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
”ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.
”ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
”ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.
”ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು. ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
”ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
”ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
”ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.
”ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
”ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು. ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
”ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ. ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
”ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು. ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
”ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ. ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ? ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ? ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ. ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. ದೇವರಲ್ಲಿ ಪಕ್ಷಪಾತವಿಲ್ಲ.
”ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು. ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು. ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ. ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ. ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
”ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
”ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು. ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.
”ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
”ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
”ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
”ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
”ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
”ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು. ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
”ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
”ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
”ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.
”ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು. ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ. “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
”ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ. “ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು. ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
”ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು. ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
”ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ. ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
”ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.
”ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
”ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
”ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
”ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
”ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ. ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು.
”ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
”ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
”ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ. ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
”ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ. ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ. ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
”ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.
”ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.
”ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
”ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
”ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ. ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
”ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.
”ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.
”ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು, ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
”ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
”ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ. ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
”ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
”ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,
”ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.
”ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
”“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ. ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
”ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ, ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
”ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
”ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.
”ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
”ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
”ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
”ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ. ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ. ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ. ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು. ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು. ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
”ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ. ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
”ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
”ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
”ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
”ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
”ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
”ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
”ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.
”ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.
”ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.
”ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ, ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ. ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,
”ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ,ನಾನು ಮೊದಲನೆಯವನೂ, ಕಡೆಯವನೂ, ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.
”ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
”ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
”ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
”ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
”ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.
”ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
”ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು. ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.
”ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
”ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
”ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.
”ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು. ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
”ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ, ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.
”ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.
”ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.
”ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು. ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.
”ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
”ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
”ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
”ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
”ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.” “ನೋಡು! ನಾನು ಬೇಗನೇ ಬರುತ್ತೇನೆ.ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ.
”