08 – ಯೇಸು
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಯೇಸು.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಯೇಸು.
ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
”ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
”ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು. ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.
”ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
”ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ, ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
”ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.
”“ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.
”ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
”(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.) ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
”ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ. ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
”ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
”ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
”ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
”ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
”ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
”ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;
”ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
”ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು. ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
”ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು. “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
”ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.
”ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
”ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು. ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
”ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು. ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
”ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು. ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
”ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
”ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
”ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.
”ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು. ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ, ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
”ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ. ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
”ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
”ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
”ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ. ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ. ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
”“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
”ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು. ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
”“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
”ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
”ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ. ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
”ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
”ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
”‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
”ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
”ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.
”ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
”ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
”ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
”ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
”ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.
”ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.
”ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
”ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
”ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು, “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು. ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು. ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು. ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ, “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
”ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
”ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು. ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
”ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು. ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ, ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು. ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು. ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
”ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
”ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
”ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು. ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
”“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.
”“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.
”“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
”ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
”ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.
”ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?
”ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.
”ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
”ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
”ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
”“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
”“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು. ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
”ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.
”ಮನುಷ್ಯಕುಮಾರನು ಬಂದನು,ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
”ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.
”“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
”ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.
”ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”
”ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು. ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.
”ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
”ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?
”ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
”ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.
”ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
”ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
”ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು. ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
”ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
”ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು. ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
”ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
”ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು. ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
”ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
”ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
”ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
”ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
”ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
”ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
”ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು. ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
”ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
”ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
”ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
”“ನೋಡಿರಿನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು. ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನುಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
”ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
”ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು. ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.
”ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು. ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು. ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು. ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.
”ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’ ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು. ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.
”ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ, “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ? “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು. ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
”ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
”“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
”ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
”ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
”ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
”“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
”ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು. ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ, ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸಒಡಂಬಡಿಕೆಯ ರಕ್ತ. ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.
”ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.
”ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ? ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.
”ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು. ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
”ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು, “ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.
”ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
”ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
”ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
”ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
”ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
”ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
”ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
”ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
”ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು. ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
”ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು. ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.
”ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
”ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
”ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
”ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು. ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು. ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು. ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
”ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು. ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು. ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು. ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು. ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು. ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
”ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
”ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
”ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
”ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
”ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
”ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
”ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು; ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು. ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
”ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
”ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು; ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು. ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
”ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?
”ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
”ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
”ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
”ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು. ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವಒಡಂಬಡಿಕೆಯ ರಕ್ತ.
”ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು. ಯೇಸುವು “ಹೌದು ನಾನೇ! “ಇದಲ್ಲದೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.
”ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು.
”ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು. ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು. ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
”“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು. ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,
”ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
”ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
”ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು. ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು. ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.
”ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
”ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
”ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.
”ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
”ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.
”ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು. ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
”ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು; ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
”ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
”ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು. ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
”ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು, “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.” ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ, ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,
”ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು. ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
”ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
”ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು. ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು. ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು. ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು. ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
”ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?
”“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.
”ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು. ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು. ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
”ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
”“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.
”ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
”ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
”ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು. ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.
”ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು? “ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
”ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.
”ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.
”ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
”ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು. ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
”ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು. ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ; ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.
”ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
”ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು. ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.
”ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.
”ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
”ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
”“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
”ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು. ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
”ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು. ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು.
”ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
”ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು. ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
”ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ,
”ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
”ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
”ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
”ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
”ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
”ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,
”ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
”ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
”ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು. ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು. ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
”ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ? ಪರಲೋಕದಿಂದ ಇಳಿದು ಬಂದವನೇ, ಅಂದರೆ,ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ. ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
”ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
”ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ. ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
”ಯೇಸು ಆಕೆಗೆ, “ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು, ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರುಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
”ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು, ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
”ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು. ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ. ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು. ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ. ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು. ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
”ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
”ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ.
”ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
”ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.
”ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ. ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ. ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.
”ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು. ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ? ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ? ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
”ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.
”ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು. ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ, ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
”ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ. ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು. ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
”ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.
”ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.
”ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು.
”ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ. ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.
”ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ. ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.
”ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.
”ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ, ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ, ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
”ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,
”“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
”ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. ಇದಲ್ಲದೆಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು. ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ. ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.
”ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ. ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು.ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.
”ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು. ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು, ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ, ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.
”ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.
”ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
”ಯೇಸು ಕಣ್ಣೀರಿಟ್ಟನು.
”ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
”ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
”ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
”ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
”ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
”ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
”ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು. ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
”ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
”ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ. ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನುತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
”ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
”ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ.ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
”“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು. “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
”ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
”ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
”ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
”“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.
”ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
”“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
”ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇನನ್ನ ಆಜ್ಞೆಯಾಗಿದೆ. ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
”“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.
”ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.
”ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದನನ್ನನ್ನೇ ಮಹಿಮೆಪಡಿಸುವನು. ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.
”ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
”ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
”ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ,ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. ನೀನು ನನಗೆ ಕೊಟ್ಟ ಕೆಲಸವನ್ನು ನಾನುನೆರವೇರಿಸಿಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ. ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
”ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು. ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
”“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ. ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
”ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು. ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
”ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು. ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
”ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
”ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ, ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.
”ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
”ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು. ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
”ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು. ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು. ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.
”ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.
”ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
”ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು. ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ. ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು. ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.
”ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.
”ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
”ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
”ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು. ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
”ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
”ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
”ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
”“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು. ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
”ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
”ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
”“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
”ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
”ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ. “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
”ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು. ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
”ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು; “ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.
”ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
”ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
”ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
”ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು. ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು. ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.
”ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
”ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
”ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.
”ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
”ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
”ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
”ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
”ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು. ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
”ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
”ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
”ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
”ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
”ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
”ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ. ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
”ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
”ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
”ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು.
”ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
”ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
”ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
”“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”
”ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.
”ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ. ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
”ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.
”ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು. ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ. “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
”ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.
”ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು. ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ. ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ. ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
”ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
”ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
”ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
”ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
”ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
”ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ, ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.
”ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
”ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.
”ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
”ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
”ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
”ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
”ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ. ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು.
”ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು. ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ. ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
”ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
”ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ, ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.
”ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.
”ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
”ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ. ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
”ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು. ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ, ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
”ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
”ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
”ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
”ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.” ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
”ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ. ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. “ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
”ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
”ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
”ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
”ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.
”ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ. ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.
”ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
”ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.
”ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.
”ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ, ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.
”ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ. ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ. ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ.
”ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
”ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.
”ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
”ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
”ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.
”ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
”ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
”ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.
”ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
”ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
”ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
”ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
”ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು” ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
”ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
”ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
”ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
”ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.
”ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.
”ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು. ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.
”ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
”ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
”ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.
”ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
”ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.
”ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
”“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.
”ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.
”ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ, ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.
”ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ,ನಾನು ಮೊದಲನೆಯವನೂ, ಕಡೆಯವನೂ, ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.
”ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು. ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ.
”ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
”ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು. ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.
”ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,
”ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
”ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.
”ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.
”ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
”ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
”ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
”ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು. ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು. ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.
”ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
”ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು.
”“ನೋಡು! ನಾನು ಬೇಗನೇ ಬರುತ್ತೇನೆ.ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ. ನಾನೇಆದಿಯೂ, ಅಂತ್ಯವೂ,ಮೊದಲನೆಯವನೂ, ಕಡೆಯವನೂ,ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.
”“ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”
”ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ. ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!
”