09 – ಪಶ್ಚಾತ್ತಾಪ

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಪಶ್ಚಾತ್ತಾಪ.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.

ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 515 ಭಾಗಗಳು

ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.

ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.

ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.

ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.

ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.

ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.

ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.

ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.

ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.

ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು. ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,

ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.

ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ. ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.

ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು. ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.

ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.

ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು. ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.

ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.

ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.

ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.

ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.

“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.

ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ, ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.

ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.

ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.

“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ, ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ, ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ, ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.

ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ. ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ, ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು. ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.

ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.

ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು. ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:

ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.

ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು. ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ. ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.

ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು. ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:

ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು. ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ?

ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.

ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!

ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ. ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.

ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು. ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.

ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.

ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.

ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.

ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.

ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.

ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.

ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.

ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.

ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ

ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.

ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.

ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.

ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.

ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.

ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.

ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.

ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?

ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.

ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.

ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.

ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.

ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.

ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ. ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು. ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.

ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.

ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.

ಆಲೆಫ್. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು. ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು. ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ.

ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.

ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.

ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.

ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ. ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.

ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.

ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.

ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ. ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.

“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ. ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.

ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ. ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ. ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು. ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.

ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.

ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.

ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.

ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.

ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.

ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.

ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.

ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು. ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!

ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ. ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ! ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.

ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.

ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.

“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು. ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.

“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.

ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ? ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.

ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.

ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು. ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು. ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.

ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು. ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ, ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.

ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.

ಕರ್ತನಾದ ನಮ್ಮ ದೇವರು ಕರುಣಿಸುವವನೂ, ಕ್ಷಮಿಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ. ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.

ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.

ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.” ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.

ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.

ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ. ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ.

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.

ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು? ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು. ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು. ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.

ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು. ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ, ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.

ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು. ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.

“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.

ನಿಮಗೆ ಸತ್ಯವಾಗಿ ಹೇಳುತ್ತೇನೆ,ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು. ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.

ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.

ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮತಪ್ಪುಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.

“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!

“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನುದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.

ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

ಹಾಗೆಯೇಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.

“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.

ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.

ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.

“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.

ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.

ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.

ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.

ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?

ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಆದರೆನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.

ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.

ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.

ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.

ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.

ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.

ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.

ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’ ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.

ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ,‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.

ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.

“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.

“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. ಅದಕ್ಕೆ ಉತ್ತರವಾಗಿ ಅರಸನು,‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.

ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸಒಡಂಬಡಿಕೆಯ ರಕ್ತ.

ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.

ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು. ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.

ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು. ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.

“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”

ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು. ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.

ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”

ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?

ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.

ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.

ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.

ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.

ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.

ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.

ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.

ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”

ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವಒಡಂಬಡಿಕೆಯ ರಕ್ತ.

“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.

ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.

ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.

ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.

ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,

ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.

ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು? ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.

ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,

ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು

“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ

ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.

ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ. “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.

ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.

ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು. ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?

ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.

ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.

ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.

“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.

ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ. ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ? ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.

ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು. ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ. ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು, ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು. ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು, ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ, ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ. ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು. ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ, ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು. ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು. ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು. ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ. ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.

ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”

ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.

ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.

ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.

ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು. ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.

ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು. ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ? ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ, “ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು. ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.

ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.

ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.

ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.

ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ. ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ

ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”

ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.

ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.

ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.

ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.

ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.

ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.

“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.

ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.

ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.

ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ. ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ. ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.

ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.

ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.

ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಇದಲ್ಲದೆಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ. ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.

ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.

ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.

ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.

ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇನನ್ನ ಆಜ್ಞೆಯಾಗಿದೆ. ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.

ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.

ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.

ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ,ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.

ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.

ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.

ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;

ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.

ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ, ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.

ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.

ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.

ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.

“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.

ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.

ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು, ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ, ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು. ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.

ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.

ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು, ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.

ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.

ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.

“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು. ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.

ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ? ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ? ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ. ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. ದೇವರಲ್ಲಿ ಪಕ್ಷಪಾತವಿಲ್ಲ.

ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.

ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.

ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ. ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.

ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು. ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ

“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.

ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು. ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.

ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.

ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.

ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.

ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ. ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು. ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.

ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.

ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ. ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ. ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ. ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ. ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು. ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು. ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.

ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ. ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ. ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.

ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ. ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ. ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ. ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ. ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.

ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ? ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.

“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ. ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.

ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ. “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ. ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.

ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.

ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ. ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.

ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ. ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.

ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.

ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.

ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.

ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.

ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.

ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ. ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ. ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ. ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.

ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು. ಮನುಷ್ಯರಿಗೆ ದಾಸರಾಗಬೇಡಿರಿ.

ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ. ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ. ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.

ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.

ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.

ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.” ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು. ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.

ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.

ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.

ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.

ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ. ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ. ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.

ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.

ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.

ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.

ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.

ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.

ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.

ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.

ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ. ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ. ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ.

ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.

ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.

ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು. ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು. ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು. ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.

ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು. ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.

ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ. ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು. ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ, ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ. ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ. ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.

ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು. ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.

ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.

ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು. ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.

ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.

ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.

ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ. ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ. ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.

ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ. ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ. ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.

ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.

ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.

ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.

ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.

ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ. ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.

ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.

ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.

ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.

ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ. ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.

ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,

ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.

ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.

ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು, ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು. ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ, ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.

ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.

ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ. ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.

ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.

ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ. ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು, ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.

‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.

ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.

ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.

ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ, ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ. ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ, “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು, “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.

ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ. ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.

ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.

ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.

ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.

ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.

ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು. ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.

ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.

ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.

ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.

ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.

ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.

ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.

ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.

ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.

ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ; ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ. ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.

ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.

ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ. ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.

ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ

ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು? ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?

ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.

ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.

ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.

ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.

ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.

ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ. ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.

ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.

ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು. ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ. ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.

ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ. ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.

ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.

ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ. ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು. ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ; ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.

ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.

ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.

ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.

ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.

ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ. ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ. ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?

ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.

ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.

ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.

ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.

ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ, ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ. ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,

ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ.ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.

ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು.

ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.

ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.

ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.

ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.

ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.

ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.

ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.

ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”

ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.

ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”

“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು.ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.

ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net