10 – ದೀಕ್ಷಾಸ್ನಾನ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ದೀಕ್ಷಾಸ್ನಾನ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ದೀಕ್ಷಾಸ್ನಾನ.
ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
”ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
”ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
”ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
”ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
”ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
”ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
”ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
”ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
”ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು. ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
”ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು? ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.
”ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು. ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು. ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
”ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು. ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ, ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು. ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು. ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
”ಯೇಸು ಅವರಿಗೆ ಹೇಳಿದ್ದೇನೆಂದರೆ, “ನಾನೂ ಸಹ ನಿಮ್ಮನ್ನು ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರಿಸಿದರೆ ಆಗ ನಾನು ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು; ‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.
”ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
”ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು. ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು. ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು. ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
”ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು. ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
”ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು; ‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು. ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.
”ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
”ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.
”ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು? ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.
”ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು,
”ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು. ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
”ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
”ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
”ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು. ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು. ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
”ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು. ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು. ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ. ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
”ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು. ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
”ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು. ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
”ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ, (ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು), ಆತನು ಯೂದಾಯವನ್ನು ಬಿಟ್ಟು ತಿರುಗಿ ಗಲಿಲಾಯಕ್ಕೆ ಹೊರಟು ಹೋದನು.
”“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
”ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ, ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
”ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು. ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
”ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
”ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
”ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
”ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು. ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
”ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು; ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು. ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
”ಕೂಡಲೇ ಅವನ ಕಣ್ಣುಗಳಿಂದ ಪರೆಗಳಂತೆ ಏನೋ ಬಿದ್ದು ಅವನ ಕಣ್ಣು ಕಾಣಿಸಿದವು. ಅವನು ಎದ್ದು ದೀಕ್ಷಾಸ್ನಾನ ಮಾಡಿಸಿಕೊಂಡನು.
”ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ, ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.
”ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು. ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು. ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
”“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
”ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು. ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
”ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ, ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು. ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
”ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
”“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು. ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು. ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು, ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
”ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
”ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
”ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
”ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
”ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
”ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.
”ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
”ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
”ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
”ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು
”ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,
”ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
”ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ. ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.
”ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು.
”ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
”ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.
”ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
”“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆಜೀವವೃಕ್ಷದ ಹಕ್ಕು ಇರುವುದು.ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.
”