11 – ಪಾಪ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಪಾಪ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಪಾಪ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
”ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
”ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.
”ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
”ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
”ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು. ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು. ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನೀನು ಎಲ್ಲಿದ್ದೀ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
”ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು. ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
”ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು. ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
”ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು. ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
”ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
”ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
”ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು. ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.
”ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
”“ಕೊಲೆ ಮಾಡಬಾರದು. “ವ್ಯಭಿಚಾರಮಾಡಬಾರದು. “ಕದಿಯಬಾರದು. “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
”ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
”ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು. ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು. ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.
”ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.
”ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
”ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.
”ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
”“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
”“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.
”ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
”ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.
”“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
”“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
”“‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು. ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
”ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.
”ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು. ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
”ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು. ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು.
”“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ
”“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
”ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
”“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
”ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ. ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.
”“ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
”“ನರಹತ್ಯ ಮಾಡಬಾರದು. “ವ್ಯಭಿಚಾರ ಮಾಡಬಾರದು. “ಕದಿಯಬಾರದು. “ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು. “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
”ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
”ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು. ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.
”ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು. ಹೆಚ್ಚುಕಡಿಮೆಯಾದ ಎರಡು ವಿಧವಾದ ಸೇರುಗಳು ಹಾಗೂ ಮೋಸ ಮಾಡುವ ತೂಕದ ಕಲ್ಲುಗಳು ನಿಮ್ಮ ಮನೆಯಲ್ಲಿ ಇರಬಾರದು. ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ. ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.
”‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
”“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
”“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
”“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
”“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
”ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:
”ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.
”ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
”ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.
”ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.
”ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
”“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
”ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು. ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
”ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.
”ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
”ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.
”ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.
”ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.
”ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು.
”ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
”ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ. ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.
”ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
”ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ. ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
”ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ
”ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ. ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
”ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ. ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ. ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
”ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
”ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
”ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
”ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
”ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
”ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
”ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
”ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
”ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
”ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು. ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
”ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.
”ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
”ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
”ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ.
”ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
”ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
”ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
”ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
”ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
”ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
”ಆತನು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳಿಗೆ ತಕ್ಕಂತೆ ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
”ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
”ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು. ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.
”ಆಲೆಫ್. ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.
”ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
”ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.
”ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.
”ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ. ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.
”ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
”ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ, ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ. ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.
”ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ, ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು, ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
”ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
”ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು. ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
”ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
”ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ. ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
”ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
”ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.
”ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
”ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
”ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
”ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
”ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.
”ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
”ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು. ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
”ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.
”ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
”ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
”ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.
”ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ. ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
”ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
”“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
”ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
”ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
”ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
”ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
”ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.
”ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
”ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು. ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
”ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ. ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
”ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
”ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
”ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?
”ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ. ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ. ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
”ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
”ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.
”ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.
”ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.
”ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
”ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
”ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
”ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ. ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ, ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
”ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
”ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
”ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ. ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು. ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
”ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
”ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
”ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
”ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
”ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?
”ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
”ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
”ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.
”ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.
”ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
”ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
”ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
”ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
”“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು. ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
”ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
”ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.
”ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
”ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ? ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.
”ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
”ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು. ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.
”ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
”ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.
”ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.
”ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ? ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.
”“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
”ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
”ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
”“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು,ಅಗ್ನಿ ನರಕಕ್ಕೆ ಗುರಿಯಾಗುವನು.
”“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ. ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
”ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
”ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
”ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
”ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
”ಹಾಗೆಯೇಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.
”“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
”ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ. ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.
”ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
”ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
”ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
”ಆದರೆನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
”ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
”“ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.
”ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು. ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
”ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.
”ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
”ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ.ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು. ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು. ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.
”“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
”ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.
”ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸಒಡಂಬಡಿಕೆಯ ರಕ್ತ.
”ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
”ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು. ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
”“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
”ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ; ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ, ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”
”ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
”ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.
”ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
”ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ. ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
”ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
”ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
”ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.
”ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,
”ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.
”ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
”ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು. ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
”ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
”ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.
”ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
”ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.
”ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
”ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
”ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
”ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ. ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
”ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.
”ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
”ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು. ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
”ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
”ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು. ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು. ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು. ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?” ಎಂದನು. ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.
”ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.
”ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
”ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
”ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
”“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
”ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
”ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
”ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
”“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
”ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
”ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
”ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
”ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು. ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
”ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು. ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
”ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
”ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
”ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
”ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ. ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ. ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
”ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ. ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
”ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
”ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು. ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
”“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
”ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
”ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು. ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
”ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
”ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
”ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
”ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
”ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
”ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
”ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ. ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
”ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
”ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
”ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು. ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
”ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ. ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು. ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು. ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.
”ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
”ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
”ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ. ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ. ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
”ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ. ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ. ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
”ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು. ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು. ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
”ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ. ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
”ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
”ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
”ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
”ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
”ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
”ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.
”ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
”ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
”ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ. ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು. ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ. ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ. ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”
”ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
”ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ. ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
”ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ. ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ. ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
”ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
”ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.
”ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.” ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
”ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.
”ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
”ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
”ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
”ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.
”ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
”ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ. ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ. ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ.
”ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
”ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.
”ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
”ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
”ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
”ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ. ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
”ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ. ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.
”ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
”ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
”ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
”ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
”ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
”ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ. ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.
”ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ. ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ. ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
”ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.
”ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
”ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು. ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.
”ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ. ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
”ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
”ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
”ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.
”ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.
”ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
”ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
”ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ, ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು. ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ. ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.
”ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
”ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
”ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
”ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
”ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.
”“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”
”ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
”ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ. ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ, “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು, “ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.
”ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ. ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
”ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
”ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.
”ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
”ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
”ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು. ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ. ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
”ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
”ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
”ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.
”ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.
”ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
”ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.
”ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
”ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
”ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.
”ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
”ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
”ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
”ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.
”ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ. ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
”ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
”ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
”“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
”ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
”ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ. ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.
”ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ. ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.
”ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.
”ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
”ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
”ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ. ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು. ಆತನಲ್ಲಿ ನೆಲೆಗೊಂಡಿರುವವನು ಪಾಪವನ್ನುಮಾಡುವುದಿಲ್ಲ; ಪಾಪಮಾಡುವವನು ಆತನನ್ನು ನೋಡಿಲ್ಲ, ತಿಳಿದೂ ಇಲ್ಲ; ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
”ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
”ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
”ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
”ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ. ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು. ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
”ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
”ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.
”ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.
”ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು.
”ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
”ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
”ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
”ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು. ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.
”ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
”ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
”ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
”ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”
”ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.
”