13 – ಸಲಿಂಗಕಾಮ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಸಲಿಂಗಕಾಮ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಸಲಿಂಗಕಾಮ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
”ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು. ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು. ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
”“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ. ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
”ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
”ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
”ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು, ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು. ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು. ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು. ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು. ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು. ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು. ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು. ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
”ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ, “ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ, ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು. ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ, “ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ. ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು. ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು. ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು. ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
”ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ. ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು. ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು. ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು. ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
”ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ
”ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
”“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ. ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.
”ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
”ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.
”ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.
”ದೇವರಾದರೋ ಸೃಷ್ಟಿಯ ಮೊದಲಿನಿಂದಲೇಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.
”ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.
”ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
”ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು. ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು. ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು. ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
”ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
”ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
”ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು. ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.
”ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
”ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ. ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ. ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
”ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
”