14 – ಗರ್ಭಪಾತ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಗರ್ಭಪಾತ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಗರ್ಭಪಾತ.
ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.
”“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ? ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ? ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
”ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
”ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
”ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
”“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
”“ಕೊಲೆ ಮಾಡಬಾರದು.
”ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.
”ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು. ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
”ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
”ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
”“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.
”ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ, ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.
”“‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.
”ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
”“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
”“ನರಹತ್ಯ ಮಾಡಬಾರದು.
”ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
”ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
”“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು. “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
”ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
”ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
”ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
”ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
”ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
”ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.
”ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
”ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ? ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ? ನೀನು ನನ್ನನ್ನು ಹಾಲಿನಂತೆ ಹೊಯ್ದು, ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ. ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ.
”ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.
”ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ.
”ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ. ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.
”ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
”ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು. ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ! ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.
”ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.
”ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
”ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
”ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ. ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ. ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
”ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು? ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ. ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ. ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.
”ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು. ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು. ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹ್ಯಿಸಿ,
”ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು. ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.
”ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.
”ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ, ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ? ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ. ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ, ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ, ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ. ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
”ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.
”ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ. ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.
”ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು. ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
”ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು. “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
”ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
”ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.
”ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ, ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.” “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
”ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
”ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
”ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
”ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
”ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
”ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
”ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
”ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ. ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
”“ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ.
”ಕರ್ತನಾದ ಯೆಹೋವನು ನನಗೆ, “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
”ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು. ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
”ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
”“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ. ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ. ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು. ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.
”ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
”ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
”ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”
”ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
”“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ? ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ? ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ. ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.
”ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ, ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು. ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.
”ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
”ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧ ಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
”ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ. ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ. ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.
”ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.
”ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
”“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.
”ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
”ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
”ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
”ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
”ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.
”ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
”ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
”ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
”ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು.
”‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
”ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ. ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ. ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.
”ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
”ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು. ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
”ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
”ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
”ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು, ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
”ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.
”ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
”ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.
”ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
”ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.
”ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
”ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.
”ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.
”