15 – ಕುಡಿತದ ಚಟ

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಕುಡಿತದ ಚಟ.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.

ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 79 ಭಾಗಗಳು

ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ. ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು. ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.

“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ. ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,

ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.

ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.

ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ. ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.

ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.

ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.

ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.

ಕುಡುಕರಲ್ಲಿಯೂ, ಅತಿಮಾಂಸಭಕ್ಷಕರಲ್ಲಿಯೂ ಸೇರದಿರು. ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.

ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು? ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ. ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ. ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು. ನೀನು ಸಮುದ್ರದ ನಡುವೆಯಾಗಲಿ, ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ. ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.

ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು. ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು. ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.

ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!

ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ! ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;

ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.

ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು. ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ. ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ.

ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.

ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.

ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ. ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.

ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.

“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.

“ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು. ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ, ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.

ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.

ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು. ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.

ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”

ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು. ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,

ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.

ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಉದ್ದವೂ, ಅಗಲವೂ, ಬಹಳ ತುಂಬುವ, ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು, ಹಾಸ್ಯಕ್ಕೂ, ಕುಚೋದ್ಯಕ್ಕೂ ಗುರಿಯಾಗುವಿ. ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ. “ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ. ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”

ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.

ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.

ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.

ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.

ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.

“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.

ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.

ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.

‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ! ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.

ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ. ಮನುಷ್ಯಕುಮಾರನು ಬಂದನು,ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ.ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.

ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ. ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.

ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.

“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.

ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.

ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು. ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ. ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ. ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,

ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.” ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು, ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.

ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.

ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು. ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.

ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು. ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.

ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,

ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯುಳ್ಳವರು ಆಗಿರಬೇಕೆಂದು ಬೋಧಿಸು. ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರಾಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಆಗಿರಬೇಕು.

ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.

ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,

ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.

ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.

ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.

ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net