17 – ಸುಳ್ಳು ಧರ್ಮಗಳು

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಸುಳ್ಳು ಧರ್ಮಗಳು.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ. ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ. ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ. ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.

ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 176 ಭಾಗಗಳು

ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.

ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು. ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.

ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು. ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.

ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು. ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು. ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.

ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು. ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು. ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.

ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.

ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು. ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.

ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು. ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು. ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.

ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.

ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.

ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.

ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.

ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು. ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು. ಅವರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದು ಕೊಟ್ಟರು. ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.

ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು. ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.

ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.

ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು. ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು, ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ. ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.

ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’

“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.

“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.

“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.

ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ನೀವು ಸ್ತ್ರೀಪುರುಷರ ರೂಪವನ್ನಾಗಲಿ, ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು. ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.

ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.

ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು. “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.

ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು. ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.

ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು. ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು. ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು. ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು. ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು.

ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು. ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.

ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ, ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.

ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ, ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ, ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.

ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು, ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು. ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.

ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.

ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.

ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು. ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.

ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.

ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ. ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು. ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು. ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.

ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ಅಲ್ಲಿ ದಾಗೋನನ ಮಗ್ಗುಲಲ್ಲೇ ಇಟ್ಟರು. ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು. ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆಯೂ, ಕೈಗಳೂ ಕಡಿಯಲ್ಪಟ್ಟು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಯೆಹೋವನ ಮಂಜೂಷದ ಮುಂದೆ ಬಿದ್ದಿತ್ತು; ಆದ್ದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ಮತ್ತು ದಾಗೋನನ ಮನೆಗೆ ಬರುವವರೆಲ್ಲರೂ ಅಷ್ಡೋದಿನ ಗುಡಿಯ ಹೊಸ್ತಿಲನ್ನು ಇಂದಿಗೂ ತುಳಿಯದಿರುವುದಕ್ಕೆ ಇದೇ ಕಾರಣ. ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು. ಅಷ್ಡೋದಿನ ಜನರು ಅದನ್ನು ನೋಡಿ, “ಇಸ್ರಾಯೇಲಿನ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಏಕೆಂದರೆ ಆತನ ಹಸ್ತವು ನಮಗೂ, ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ” ಎಂದು ಹೇಳಿ

ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.

ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು. ಆಗ ಸೌಲನು ವಸ್ತ್ರಗಳಿಂದ ತನ್ನನ್ನು ಮಾರ್ಪಡಿಸಿಕೊಂಡು, ಇಬ್ಬರು ಸೇವಕರೊಡನೆ ಹೊರಟು, ರಾತ್ರಿಯಲ್ಲಿ ಆಕೆಯ ಮನೆ ಸೇರಿ, “ದಯವಿಟ್ಟು ನನಗೋಸ್ಕರ ಸತ್ತವರಲ್ಲಿ ವಿಚಾರಿಸಿ ಕಣಿಹೇಳು. ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು” ಎಂದು ಆಕೆಯನ್ನು ಬೇಡಿಕೊಂಡನು ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.

ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ. ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು. ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.

ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.

ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.

ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು. ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ. ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.

ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು. ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ ನಮಗೆ ಕಿವಿಗೊಡು” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ. ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು. ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು. ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.

ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು. ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು. ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು. ಅವರು ತೆಗೆದುಕೊಂಡು ಬರಲು, “ಇನ್ನೊಂದು ಸಾರಿ ತನ್ನಿರಿ” ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.

ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು. ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು. ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು. ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.

ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.

ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.

ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು. ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.

ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು. “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು.

ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು. ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು. ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು. ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು. ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.

ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.

ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು. ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ. ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.

ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.

ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು. ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.

ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.

“ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ, ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.

ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.

ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು. ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು. ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು. ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.

ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.

ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.

ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.

ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.

ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.

ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.

ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು. ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.

ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು. ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.

ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.

ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು. ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.

ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.

ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.

ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. ಅವರು ತಮ್ಮ ಗಂಡು ಹೆಣ್ಣು ಮಕ್ಕಳನ್ನು ಭೂತಗಳಿಗೆ ಬಲಿಕೊಟ್ಟರು. ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.

ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. ಅವು ಬಾಯಿದ್ದರೂ ಮಾತನಾಡುವುದಿಲ್ಲ; ಕಣ್ಣಿದ್ದರೂ ನೋಡುವುದಿಲ್ಲ. ಕಿವಿಯಿದ್ದರೂ ಕೇಳುವುದಿಲ್ಲ; ಮೂಗಿದ್ದರೂ ಮೂಸುವುದಿಲ್ಲ. ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ. ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.

ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. ಅವುಗಳಿಗೆ ಬಾಯಿದ್ದರೂ ಮಾತನಾಡುವುದಿಲ್ಲ, ಕಣ್ಣಿದ್ದರೂ ನೋಡುವುದಿಲ್ಲ, ಕಿವಿಯಿದ್ದರೂ ಕೇಳುವುದಿಲ್ಲ, ಇದಲ್ಲದೆ ಅವುಗಳ ಬಾಯಲ್ಲಿ ಶ್ವಾಸವೇ ಇಲ್ಲ. ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.

ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.

ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.

ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.

“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ? ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ! ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು. ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ! ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.

ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.

ಏಕೆಂದರೆ ನೀವು ನಿಮ್ಮ ಸ್ವಂತ ಕೈಯಿಂದ ರೂಪಿಸಿಕೊಂಡಿರುವ ಪಾಪದ ಗುರುತಾದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನೂ ಬಿಸಾಡುವನು.

ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.

ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.

ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.

ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು. ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು? ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು. ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು. ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು. ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು. ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.

ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು. ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.

ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು. ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.

ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು. ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ. ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ. ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.

ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ, ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ? ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.

ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.

ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.

ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು. ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ. ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ

ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.

ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.

“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ. ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ. ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.

ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”

ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.

‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು. ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.

ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆ ಮಾಡಿದ್ದಾರೆ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.

“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.” ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು. ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”

ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ. “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.

“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.

ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು. ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.

“ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.

ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,

“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.

ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ. ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ. ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.

ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’ ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.

“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು, ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,

ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.

ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ. ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.

ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ

ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು. ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು. ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು. ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ. ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.

“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

“ನಿಮಗೆನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.

ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.

ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.

ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.

ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು. ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ, ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ? ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು. ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.

ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು. ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು. ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು; “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.

ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು. ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು. ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.

ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ. ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು. “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ; ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ. ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ, ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ. ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.

ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು. ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.

ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.

ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,

ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.

ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ, ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ. ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ. ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.

ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು? ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.

ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,

ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.

ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.

ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.

ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ. ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.

ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ. ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.

ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.

ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು. ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು. ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ. ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.

ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು. ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.

ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net