18 – ಸುಳ್ಳು ಶಿಕ್ಷಕರು

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಸುಳ್ಳು ಶಿಕ್ಷಕರು.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.

ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 328 ಭಾಗಗಳು

ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. ಆ ಸ್ತ್ರೀಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು, ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ. ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.

ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ. ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.

ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು. ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.

ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು. ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.

“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.

“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು. “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.

ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.

ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ. ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.

ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.

ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,

ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ, “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ? ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.

ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು. ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.

ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು, ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು. ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.

ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು. ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ? ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ. ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.

ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.

ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು. ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ, ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.

ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.

ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.

ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ? ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ. ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.

ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.

ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.

ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.

ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.

ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.

“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು? ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.

ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.

ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ. ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು. ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.

ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ. ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ, ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು, ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.

ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು. ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳಿವಳಿಕೆಯನ್ನು ಪಡೆಯುವನು.

ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.

ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.

ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.

ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು. ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು. ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.

ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.

ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.

ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು.

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.

ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.

ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.

ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.

ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು. ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.

ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.

ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ. ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.

ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.

ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ. ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ. ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ. ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.

ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ. ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.

ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ! ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು. ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ! ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ. ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,

ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.

ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?

ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.

ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ. ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ. ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”

ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು. ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?

ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ. ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು; ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೆ ಹೀಗೆಯೇ ಆಗಲಿ’” ಅಂದುಕೊಂಡಿದ್ದಾರೆ.

ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ; ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ. ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ. ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.

ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.

ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ. ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು? ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.

ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.

ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.

ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.

ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ. ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.

ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ. ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.

ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ. ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ. ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು? ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ. ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.

ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು. ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’ ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.

ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು. ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’”

‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು. ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.

‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’” ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.

ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ. ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.

ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ. ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ. ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.

ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, “ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!

ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳ ಹಾಗೆ ಇದ್ದಾರೆ. ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ, ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ. ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.

“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.

‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು. “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ; ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’ ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?” ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು; ನೀವು ಸುಣ್ಣಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲ ಸಮಮಾಡಿ ಅದರ ಅಸ್ತಿವಾರವನ್ನು ಬಯಲುಪಡಿಸುವೆನು; ಅದು ಬಿದ್ದುಹೋಗುವುದು ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು. ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು, ‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.

“‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’

ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ. ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”

ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ. ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.

ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ. ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು. ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು. ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’

“ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು. ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.

ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.

ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ. ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು. ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು. ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”

“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ? ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ. ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು. ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.” “‘ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”

“‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.

“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ. ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ. ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.”

ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”

ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.

ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.

ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ, “ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು. ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ” ಎಂದು ನುಡಿಯುತ್ತಾನೆ.

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ; ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”

ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.

ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು. ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು. “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು,

ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ; “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”

ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.

“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. ನಿಮಗೆ ಸತ್ಯವಾಗಿ ಹೇಳುತ್ತೇನೆ,ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ? ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ. ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು. “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.

“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು. ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.

ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.

ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.

“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ. ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು. ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.

ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?

“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.

ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು. ಅವರನ್ನು ಬಿಡಿರಿ, ಅವರುಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.

ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು. ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.

ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.

“ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.

ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?

ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, “ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ; ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ. ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನುಮುಟ್ಟಲೊಲ್ಲರು. ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.

ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ. ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು ಆದರೆನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ. ಅಯ್ಯೋ, ಕಪಟಿಗಳಾದಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.

ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು. ಕುರುಡ ಮಾರ್ಗದರ್ಶಿಗಳೇ, ನೀವುಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ. ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.

ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ. ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ. ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ. ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.

ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.

ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.

ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. “ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.

ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ. ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.

ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು. ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;

ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.

ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”

ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.

“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.

ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ. ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು. ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು. ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು. ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.

ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು. ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.

ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.

ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ, ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.

ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ. ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.

ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ. ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.

ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು. ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.

ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.

ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.

ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ. ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.

ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.

ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು. ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ, ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.

“ನಿಮಗೆನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ. ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.

ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.

ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ. ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ, “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.

ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

ಆ ಸಹಾಯಕನು ಯಾರೆಂದರೆಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.

ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.

ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.

ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ? ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.

“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ. ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು. ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.

ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.

ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.

ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.

ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.

ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ. ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.

ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.

ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.

ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ. ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.

ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.

“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.

ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.

ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು. ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ. ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.

ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ. ನಾನು ಶಿಲುಬೆಗೆ ಹಾಕಲ್ಪಟ್ಟ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವುದನ್ನೂ ತಿಳಿಯದವನಾಗಿ ನಿಮ್ಮಲ್ಲಿ ಇರುವೆನೆಂದು ತೀರ್ಮಾನಿಸಿಕೊಂಡೆನು. ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು. ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.

ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;

ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ. ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ. ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.

ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು. ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ. “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,” “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ

ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.

ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.

ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.

ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ. ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.

ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು. ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ. ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು. ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ. ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ. ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.

ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ. ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ. “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.

ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ. ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ. ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು. ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ? ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ. ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.

ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ. ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.

ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.” ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.

ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ. ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು? ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ. ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ. ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ. ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು. ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ. ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು, ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.

ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ. ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.

ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ, ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.

ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.

ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.

ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.

ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”

ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?

ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ. ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.

ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು. ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.

ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.

ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.

ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.

ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.

ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.

ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.

ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,

ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.

ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.

ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ, “ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ. ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.

ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.

ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.

ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ, ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.

ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.

ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ, ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ. ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ. ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ. ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ. ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ. ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.

ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು. ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು. ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು. ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.

ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,

ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ. ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.

ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ. ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ. ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ, ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ. ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ. ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.

ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.

ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು. ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ. ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ. ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು. ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ, ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.

ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ. ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ. ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.

ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ. ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.

ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ. ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ. ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ, ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.

ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು. ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯುಳ್ಳವರು ಆಗಿರಬೇಕೆಂದು ಬೋಧಿಸು.

ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರಾಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಆಗಿರಬೇಕು. ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.

ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು. ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು; ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.

ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ, ಎದುರುತ್ತರಕೊಡದೆ, ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.

ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ. ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು; ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.

ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು. ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು. ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.

ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ? ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.

ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು, ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ. ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ. ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು. ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.

ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ. ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.

ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ. ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.

ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು” ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.

ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.

ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ. ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.

ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.

ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.

ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.

ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ. ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.

ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ. ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.

ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.

ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ. ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.

ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ. ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.

ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.

ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.

ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.

ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ. ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.

ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು. ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.

“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನುಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.

ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮಂದಿರದವರಾಗಿದ್ದಾರೆ.

ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. ಹಾಗೆಯೇ,ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು.

ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.

ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.

ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.

ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.

ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.

ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.

ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂಹೊರಗಿರುವರು” ಎಂದು ಹೇಳಿದನು.

ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net