19 – ಚರ್ಚ್

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಚರ್ಚ್.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ. ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು. ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 311 ಭಾಗಗಳು

ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.

ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.

ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು. ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.

ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ. ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.

ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.

“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.

ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು. ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು. ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.

“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ. ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,

ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು. ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.

ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.

“ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು” ಎಂದು ಹೇಳಿದನು.

ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು. ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.

ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,

ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.

ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು.

ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.

ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು. ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು. ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.

ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.

ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.

ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.

ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.

ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.

ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.

ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.

ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ

ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.

ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.

ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.

ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.

ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.

ಯಾತ್ರಾಗೀತೆ; ದಾವೀದನದು. ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!

ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.

ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.

ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.

ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.

ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.

ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು. ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,

ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.

“ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ. ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು. ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು. ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.

ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ. ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ. ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ? ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ. ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು. ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.

“‘ಆದುದರಿಂದ ಕುರುಬರೇ, ಯೆಹೋವನ ಮಾತನ್ನು ಕೇಳಿರಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.” “‘ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”

“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ. ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ. ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಕೊಳ್ಳೆಯಾಗದಂತೆ ನಾನು ಅದನ್ನು ರಕ್ಷಿಸಿ, ಟಗರುಹೋತಗಳಿಗೂ, ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.”

“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.

ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.

ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.

ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.

ಇದು ದೇಶದಲ್ಲಿ ಪರಿಶುದ್ಧ ಭಾಗವೂ; ಯೆಹೋವನಿಗೆ ಸೇವೆ ಮಾಡಲು ಸಮೀಪಿಸುವಂತೆ, ಇದು ಪರಿಶುದ್ಧ ಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿಯೂ, ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿಯೂ ಇರುವುದು.

ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು. ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.

ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;

ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.

ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,

ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.

ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು. ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ. ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.

ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.

“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ;ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ. ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು. ಮತ್ತುಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?

ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.

“ನಿಮ್ಮಲ್ಲಿಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

“ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತು ಕೇಳದೇ ಹೋದರೆಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.

ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ. ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.

ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು. ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು. ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು ಆದರೆನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.

ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.

ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.

ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು. ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.

ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ, ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.

ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?

ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ. ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು. ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;

ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.

ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.

ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು; ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.

ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.

“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,

ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.

ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.

ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.

ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು. ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.

ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.

ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು, ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.

ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು. ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.

ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ. ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.

ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.

ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.

ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.

ಇದಲ್ಲದೆಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ. ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.

ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ. ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.

ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.

ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.

ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ,ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.

ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,

ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು. ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು. ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು. ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು. ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು. ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು. ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು. ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.

ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು. ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು. ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು. ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು. ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು. ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.

ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.

ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು. ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು. ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು. ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು. ಆಗ ಅವರು ಕೆಲವು ಜನರಿಗೆ, “ಇವನು ಮೋಶೆಗೆ ವಿರೋಧವಾಗಿಯೂ, ದೇವರಿಗೆ ವಿರೋಧವಾಗಿಯೂ ದೂಷಣೆಯ ಮಾತುಗಳನ್ನಾಡುವುದನ್ನು ಕೇಳಿದೆವೆಂದು” ಹೇಳಿರಿ ಎಂದು ಕೆಲವರನ್ನು ಮನವೊಲಿಸಿದರು.

ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ. “‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?

ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.

ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು. ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು. ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು. ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.

ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ; ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು. ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು. ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು; ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು. ಅವನು ಮೂರು ದಿನಗಳು ಕಣ್ಣುಕಾಣದೆ, ಏನೂ ತಿನ್ನಲಿಲ್ಲ ಮತ್ತು ಏನೂ ಕುಡಿಯದೇ ಇದ್ದನು.

ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು. ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು. ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.

ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು. ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು. ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು. ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು.

ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.

ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.

ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.

ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು. ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.

ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು. ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು. ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು. ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು. ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು. ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.

ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.

ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು. ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.

ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.

ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.

ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು. ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.

ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ. ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು. ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು. ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.

ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.

ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,

ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.

ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.

ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ. ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ. ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ. ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.

ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.

ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ; ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು. ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ. ಅವರ ಮನೆಯಲ್ಲಿ ಸೇರಿಬರುವ ಸಭೆಗೆ ಸಹ ನನ್ನ ವಂದನೆಯನ್ನು ತಿಳಿಸಿರಿ. ಆಸ್ಯ ಸೀಮೆಯಲ್ಲಿ ಕ್ರಿಸ್ತನಿಗೆ ಪ್ರಥಮಫಲವಾಗಿರುವ ನನ್ನ ಪ್ರಿಯನಾದ ಎಫೈನೆತನಿಗೆ ವಂದನೆ.

ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.

ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,

ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು. ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ. ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು. ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?

ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.

ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.

ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;

ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.

ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ. ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು. ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು. ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.

ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು. ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.

ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ. ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.

ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ. ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ. ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?

ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ? ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.

ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!

ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.

ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ. ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ. ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ, ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ. ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.

ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.

ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ. ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ. ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.

ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ. ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು. ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ. ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು. ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.

ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ. ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ. ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು, ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.

ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.

ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ. ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ. ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು? ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ. ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ. ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ? ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ. ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ. ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.

ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ. ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?

ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು. ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ. ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.

ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.

ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ. ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ? ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು, ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.

ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ. ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ. ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ. ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು. ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ. ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.

ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ. ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು. ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ? ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ. ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.

ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ. ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.

ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.

ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”

ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.

ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು. ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.

ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.

ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.

ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.

ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.

ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,

ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ. ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.

ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ. ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.

ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.

ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.

ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.

ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು. ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ. ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.

ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.

ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.

ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.

ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.

ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.

ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು. ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.

ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. “ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.

ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ, ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.

ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.

ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.

ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ. ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.

ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ. ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ. ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ. ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು. ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.

ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ. ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ, ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ. ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.

ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.

ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.

ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ. ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.

ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು. ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು. ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು. ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು. ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.

ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ. ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು. ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು. ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು? ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು. ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.

ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ, ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು. ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ. ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು. ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು. ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.

ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.

ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.

ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ. ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ. ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ. ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು. ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ. ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.

ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,

ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.

ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು. ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ. ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ. ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ. ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು. ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು. ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು, ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.

ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ, “ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ. ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,

ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ. ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.

ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.

ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.

ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ, ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,

ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.

ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು” ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ. ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ. ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?

ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ, ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ. ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.

ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.

ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.

ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ. ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.

ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು. ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.

ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.

ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ. ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.

ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ

ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳದೂತರು, ಆ ಏಳು ದೀಪಸ್ತಂಭಗಳು ಅಂದರೆಆ ಏಳು ಸಭೆಗಳು.”

“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡುಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನುಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. ನೀನು ತಾಳ್ಮೆಯುಳ್ಳವನಾಗಿನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ.ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು. ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ. ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.

“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು,ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂಹೇಳುವುದೇನಂದರೆ, ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮಂದಿರದವರಾಗಿದ್ದಾರೆ. ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.

“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ,ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ, ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ. ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. ಹಾಗೆಯೇ,ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆನಾನು ಬೇಗನೆ ನಿನ್ನ ಬಳಿಗೆ ಬಂದುನನ್ನ ಬಾಯಿಂದ ಹೊರಬರುವ ಕತ್ತಿಯಿಂದಅವರ ಮೇಲೆ ಯುದ್ಧ ಮಾಡುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು.ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.

“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು. ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,ಜಾರತ್ವಮಾಡಬಹುದೆಂದೂವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ. ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ. ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನುಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ. ಆದರೆನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ. ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ,ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ,ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನುಸತ್ತವನಾಗಿರುವೆ. “ಎಚ್ಚರವಾಗು, ಸಾಯುವ ಹಾಗಿರುವಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ. ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ. ಆದರೂತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರುಯೋಗ್ಯರಾಗಿರುವುದರಿಂದಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು. ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,ಪರಿಶುದ್ಧನೂ,ಸತ್ಯವಂತನೂ,ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು. ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನುಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರುನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು. ಸೈರಣೆಯಿಂದಿರಬೇಕೆಂಬನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ. ನಾನುಬೇಗನೇ ಬರುತ್ತೇನೆ,ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು. ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ,ದೇವರ ಸೃಷ್ಟಿಗೆ ಮೂಲನೂ ಆಗಿರುವ‘ಆಮೆನ್’ ಎಂಬಾತನುಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ.ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು. ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.

ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.

ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.

ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.

ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.

ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.

ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು. ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ. ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು. ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ). ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.

ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ, ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.

“ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net