20 – ಪ್ರಾರ್ಥನೆ

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಪ್ರಾರ್ಥನೆ.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು. ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.

ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮತಪ್ಪುಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 292 ಭಾಗಗಳು

ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;

“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ. ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ. ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು. ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.

ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.

ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು. ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು. ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ, ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು. ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,

ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.

ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ. ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.

ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.

ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.

ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.

ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.

ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.

ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.

ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.

ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.

ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು

ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು. ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು” ಎಂದು ಪ್ರಾರ್ಥಿಸಿದನು. ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.

ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.

ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.

ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು. “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.

ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.

“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.

ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.

ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ

ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು. ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.

ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು. ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು. ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.

ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ, ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು. ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.

ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.

ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು. ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.

ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.

ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.

ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.

ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.

ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.

ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು. ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು. ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.

ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ: “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.

ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.

ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು. ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ, ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.

ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.

ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು. ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.

ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.

ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.

ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,

(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು. ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,

ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.

ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.

ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.

ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ. ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.

ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.

ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.

ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು. ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.

ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನನ್ನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.

ದಾವೀದನ ಪ್ರಾರ್ಥನೆ. ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.

ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.

ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.

ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.

ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.

ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ. ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು. ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.

ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.

ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.

ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.

ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.

ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ. ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.

“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ. ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.

ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು. ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ

ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.

ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ. ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.

ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ

ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.

ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು. ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ. ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.

ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.

ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು. ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು. ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.

ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.

ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.

ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ. ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ. ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ; ಕಿವಿಗೊಟ್ಟು ನನ್ನ ಕೂಗನ್ನು ಕೇಳು.

ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.

ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.

ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,

ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ. ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.

ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಕೂಗು ನಿನಗೆ ಮುಟ್ಟಲಿ. ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.

ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.

ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.

ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು. ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು. ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.

ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.

ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ.

ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.

ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.

ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು. ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು. ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ. ನಿನ್ನ ನುಡಿಯನ್ನು ಧ್ಯಾನಿಸಲು, ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ. ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು, ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ.

ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.

ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ದಾವೀದನ ಕೀರ್ತನೆ. ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು. ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.

ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು. ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.

ದಾವೀದನ ಕೀರ್ತನೆ. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.

ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ. ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ. ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು. ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.

ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು. ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು. ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.

ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.

ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.

ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.

ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ. ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,

ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.

ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.

ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.

ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.

ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,

ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.

“ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.

ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು. ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’

ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.

‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.

ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು. ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು. ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.

ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.

ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ.

ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು. ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ. ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”

ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ. ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.

ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ. ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು. ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.

ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು. ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು. ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.

ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು. ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ, ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು

ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆಯ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿಮಿತ್ತವೇ ಪ್ರಸನ್ನಮುಖದಿಂದ ನೋಡು. ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ. ಸ್ವಾಮೀ, ಕೇಳು! ಸ್ವಾಮೀ, ಕ್ಷಮಿಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ, ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!”

ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು. ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು. ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು. ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.

ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು. ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು. ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು. ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು. ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ, ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು. ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.

ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.” ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.

ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.

“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”

ನಾನಂತು ಯೆಹೋವನನ್ನು ಎದುರುನೋಡುವೆನು. ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.

ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.

“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?

ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು. ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”

“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”

ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.

ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.

“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀನು ಪ್ರಾರ್ಥನೆಮಾಡುವಾಗನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ. ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.

ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮತಪ್ಪುಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.

ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.

“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? ಮೀನು ಕೇಳಿದರೆ ಹಾವನ್ನು ಕೊಡುವನೋ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?

ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ

ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.

ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.

ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು. ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.

ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,

ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ, ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು. ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು. ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು. ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ? ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು. ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.

ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.

ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.

ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು. ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.

ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.

ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.

ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು. ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.

ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು. ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು. ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು. “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು. ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.

ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.

ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.

ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು. ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.

ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು

ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.

ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.

ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು, ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.

ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.

“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.

ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು. ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.

ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.

ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’ ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.

ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು. ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.

ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು. ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ, ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.” ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ. ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.

ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ. ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು. ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು. ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.

ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.

ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ, “ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು. ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು. ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು. ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು, ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.

ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.

ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.

ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.

ಇದಲ್ಲದೆಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.

ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು. ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು. “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ. ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. ಆ ಸಹಾಯಕನು ಯಾರೆಂದರೆಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.

ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.

ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ,ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. ನೀನು ನನಗೆ ಕೊಟ್ಟ ಕೆಲಸವನ್ನು ನಾನುನೆರವೇರಿಸಿಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ. ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು. “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ. ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ. ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತುನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ. ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು. ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ. ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ,ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು. ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು.ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ. ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ. ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ. ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ. ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ. ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. “ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ. ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು. ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ. ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ. ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.

ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.

ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು. ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.

ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.

ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು; ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.

ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.

ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.

ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.

ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.

ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.

ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.

ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.

ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.

ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.

ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.

ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.

ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ. ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು. ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು. ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ? ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ. ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ. ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.

ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ. ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ? ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು, ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.

ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ.

ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.

ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.

ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.

ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.

ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.

ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.

ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ, ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.

ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.

ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,

ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.

ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.

ಯಾವಾಗಲೂ ಸಂತೋಷಿಸಿರಿ, ಎಡೆಬಿಡದೆ ಪ್ರಾರ್ಥನೆಮಾಡಿರಿ, ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.

ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.

ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.

ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.

ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.

ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.

ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.

ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,

ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ. ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.

“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”

ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ.

ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.

ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ. ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.

ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ. ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ. ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.

ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.

ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net