21 – ಪೂಜೆ

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಪೂಜೆ.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 534 ಭಾಗಗಳು

ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.

ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ; ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.

ಅಬ್ರಾಮನು, ಸೊದೋಮಿನ ಅರಸನಿಗೆ,

ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,

ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,

ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.

ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.

ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.

ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.

ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.

ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.

ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು. ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.

ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ. ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.

ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ. ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.

ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?

ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”

ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.

ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು. ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಕರೆದುಕೊಂಡು ಬರಲು, ಅವರು ಬೆಟ್ಟದ ಕೆಳಗೆ ನಿಂತುಕೊಂಡರು. ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು. ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು. ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು. ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.

ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು. ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು. ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.

ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು. ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು. ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು. ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು. ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು. ತರುವಾಯ ನಾನು ನನ್ನ ಕೈಯನ್ನು ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವುದಿಲ್ಲ” ಎಂದು ಯೆಹೋವನು ಆಜ್ಞಾಪಿಸಿದನು.

ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು. ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ; ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ. ಮೋಶೆ ತ್ವರೆಪಟ್ಟು ನೆಲಕ್ಕೆ ಬಾಗಿ ನಮಸ್ಕರಿಸಿ,

ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.

ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು. ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.

ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು. ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.

“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.

ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು. ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.

ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.

ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.

ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.

ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.

ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.

ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ. ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.

ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.

“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.

ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು; ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.

ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.

ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು. ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.

ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,

ನಾನು ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡುವೆನು. ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು. ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;

ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.

ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು. ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.

ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.

ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.

“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.

ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು. ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು. ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.

“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.

ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.

ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು. ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲರೂ ಅರ್ಭಟಿಸುತ್ತಾ, ತುತ್ತೂರಿ ಊದುತ್ತಾ, ಯೆಹೋವನ ಮಂಜೂಷವನ್ನು ತಂದರು. ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಿಕಿಯಿಂದ ಇಣಿಕಿ ನೋಡಿ, ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ, ಕುಣಿಯುತ್ತಾ ಇರುವುದನ್ನು ಕಂಡು, ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು

ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.

ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.

ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು. ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.

ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.

“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?

ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.

ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.

ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.

ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.

ಆಗ ದಾವೀದನು ಲೇವಿಯರ ಪ್ರಧಾನರಿಗೆ, “ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ, ಕಿನ್ನರಿ, ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹಧ್ವನಿ ಮಾಡುವುದಕ್ಕಾಗಿ ನೇಮಿಸಿರಿ” ಎಂದು ಆಜ್ಞಾಪಿಸಿದನು.

ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು. ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು. ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.

“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ. ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ. ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.

ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ. ಜನಾಂಗಗಳಲ್ಲಿ ಆತನ ಘನತೆಯನ್ನು ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಿಪಡಿಸಿರಿ. ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು. ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು. ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ. ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ. ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ. ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ, ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. ಭೂನಿವಾಸಿಗಳಿಗೆ ನ್ಯಾಯತೀರಿಸುವುದಕ್ಕೆ ಬರುವನೆಂದು ಯೆಹೋವನ ಮುಂದೆ ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ. ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು. ನಮ್ಮ ಸಹಾಯಕನಾಗಿರುವ ದೇವರೇ, ನಮ್ಮನ್ನು ರಕ್ಷಿಸು; ಅನ್ಯಜನಗಳಲ್ಲಿ ಚದುರಿಹೋಗಿರುವ ನಮ್ಮನ್ನು ಬಿಡಿಸಿ ಒಟ್ಟುಗೂಡಿಸು; ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು ಅನ್ನಿರಿ. ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.

ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ

ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ. ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ. ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು. ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.

ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು. ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು. ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು. ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.

ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?

ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು. ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು. ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.

ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.

ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.

ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.

ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.

ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು. ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.

ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:

ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.

ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು. ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ. ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.

ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ.

ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.

ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.

ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ, “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.

(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು. ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.

ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?

ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.

ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು. ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.

ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು. ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.

ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು? ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು? ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.

“ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು. ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ! ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು. ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ. ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.

ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?

ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ. ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.

ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.

“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.

ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.

ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.

ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.

ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.

ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.

ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ. ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ. ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.

ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?

ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.

ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.

ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.

ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ. ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು. ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು. ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ. ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು. ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.

ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.

ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು. “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.

ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ದಾವೀದನ ಕೀರ್ತನೆ. ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ. ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.

ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ. ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.

ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ. ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ. ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.

ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.

ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.

ನನ್ನ ನ್ಯಾಯಸ್ಥಾಪನೆಯನ್ನು ಬಯಸುವವರು ಆನಂದದೊಡನೆ ಜಯಧ್ವನಿಮಾಡಲಿ; ತನ್ನ ಸೇವಕನ ಹಿತವನ್ನು ಕೋರುವ ಯೆಹೋವನಿಗೆ ಸ್ತೋತ್ರ ಎಂದು ಯಾವಾಗಲೂ ಹೇಳುವವರಾಗಲಿ. ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.

ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.

ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.

ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ. ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?

ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.

ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.

ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ. ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.

ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.

ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.

“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.

ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.

ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.

ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು. ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.

ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ. ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ. ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು; ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ

ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. ಸೆಲಾ ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.

ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.

ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.

ಭೂರಾಜ್ಯಗಳೇ, ದೇವರಿಗೆ ಗಾಯನಮಾಡಿರಿ; ಕರ್ತನನ್ನು ಸಂಕೀರ್ತಿಸಿರಿ. ಸೆಲಾ ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು. ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ. ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.

ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.

ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.

ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.

ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ. ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ. ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.

ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.

ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.

ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.

ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು. ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.

ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು. ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು. ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು? ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.

ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.

ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ. ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ. ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ. ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ

ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು. ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.

ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.

ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.

ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.

ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು. ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು? ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.

ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.

ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು. ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.

ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ. ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ. ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.

ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ. ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ. ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.

ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ. ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ. ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.

ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.

ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.

ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.

ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ. ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ. ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು. ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.

ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.

ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ದಾವೀದನ ಕೀರ್ತನೆ. ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.

ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ, ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,

ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ. ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು. ನೀನಾದರೋ ಏಕರೀತಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.

ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.

ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.

ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ. ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.

ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ. ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.

ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ. ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.

ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ. ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ. ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು. ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು. ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ. ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ. ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,

ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು. ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?

ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು. ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!

ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.

ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.

ದಾವೀದನ ಕೀರ್ತನೆ. ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ! ಸ್ವರಮಂಡಲವೇ, ಕಿನ್ನರಿಯೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. ಯೆಹೋವನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ. ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಯೆಹೋವನನ್ನು ಬಹಳವಾಗಿ ಕೊಂಡಾಡುವೆನು; ಜನಸಮೂಹದ ಮಧ್ಯದಲ್ಲಿ ಆತನನ್ನು ಕೀರ್ತಿಸುವೆನು.

ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.

ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ. ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.

ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.

ದಾವೀದನ ಕೀರ್ತನೆ. ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.

ನಾವೋ ಇಂದಿನಿಂದ ಸದಾಕಾಲವೂ ಯೆಹೋವನನ್ನು ಕೊಂಡಾಡುವೆವು. ಯೆಹೋವನಿಗೆ ಸ್ತೋತ್ರ!

ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ, ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!

ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

ಯೆಹೋವನ ಭಕ್ತರು, “ಆತನ ಕೃಪೆಯು ಶಾಶ್ವತ” ಎಂದು ಹೇಳಲಿ.

ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.

ನನಗೆ ಸದುತ್ತರವನ್ನು ದಯಪಾಲಿಸಿ ರಕ್ಷಿಸಿದಾತನೇ, ನಿನ್ನನ್ನು ಕೊಂಡಾಡುತ್ತೇನೆ. ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು; ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. ಈ ದಿನವು ಯೆಹೋವನಿಂದಲೇ ನೇಮಕವಾದದ್ದು; ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.

ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.

ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.

ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.

ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.

ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ. ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,

“ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”

ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.

ಯೆಹೋವನಿಗೆ ಸ್ತೋತ್ರ! ಯೆಹೋವನ ನಾಮವನ್ನು ಸ್ತುತಿಸಿರಿ. ಯೆಹೋವನ ಸೇವಕರೇ, ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ. ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.

ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!

ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು. ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು. ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.

ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು, ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.

ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು. ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು. ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು. ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು. ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು. ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.

ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವುದು, ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು. ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು. ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು. ನಿನ್ನ ರಾಜ್ಯವು ಶಾಶ್ವತವಾಗಿದೆ, ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.

ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.

ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು. ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!

ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.

ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ. ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ. ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.

ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ. ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ. ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ. ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ. ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು. ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.

ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು, ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು, ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು, ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು, ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.

ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.

ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

ನಿನ್ನ ಬಾಯ ಮುದ್ದುಗಳಿಂದ ನನಗೆ ಮುದ್ದಿಡು ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು. ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.

ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?

ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.

ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ.

ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.

ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.

ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.

ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.

ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು. ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು. ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.

ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.

ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು. ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.

ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ. ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.

ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.

ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.

ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ. ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.

ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.

ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.”

ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.

ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?

ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ? ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ. ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.

ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.

ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು. ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.” ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ. ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ. ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.

ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.

ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ. ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.

ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.

ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು. ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು. ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.

ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.

ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ. ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!

ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.

ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”

ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು. ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.

“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.

ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು. ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು. ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?

ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.

ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.

ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?

“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು. ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.

ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.

ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ; ಆತನು ಕೆಡುಕರ ಕೈಯಿಂದ ದೀನನ ಪ್ರಾಣವನ್ನು ರಕ್ಷಿಸಿದ್ದಾನೆ.

ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”

ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.

ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.

“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.

“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?

ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”

ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”

ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ.

ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.

ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.

ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.

ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.

ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.

ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು. ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.

ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು. ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು.

ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು. ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು. ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು. ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು. ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು. ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು. ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.

ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.

ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು, “ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ. ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ. ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.

“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ; ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.

ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.

ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.

ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.

ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.

ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.

ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.

ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು. ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.

ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.

ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.

ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು

ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.

ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.

ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.

ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.

ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.

ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.

ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು. ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.

ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.

ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.

“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.

ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.

ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು. ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.

ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.

ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.

“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.

ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.

ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.

ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.

ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.

ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.

ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.

ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.

ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.

ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನುಒಬ್ಬನೇ ದೇವರು. ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.

ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.

ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”

ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.

ಯೇಸುವು “ಹೌದು ನಾನೇ! “ಇದಲ್ಲದೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.

ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು.

“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.

ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.

ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.

ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.

ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.

ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು.

ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.

ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.

ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.

ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.

ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.

ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.

ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,

ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.

ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.

ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.

ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.

ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.

ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ, “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು. ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ, ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.

ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು. ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.

ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.

ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.

“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.

ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.

ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.

ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.

ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು. ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.

ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ. ಸಮಾರ್ಯದವರಾದನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ. ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರುಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.

ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.

ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.

ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.

ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.

ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು

ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು. ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು. ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.

ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.

ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.

ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ. ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನುತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.

ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.

ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.

ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ,ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು. ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. ನೀನು ನನಗೆ ಕೊಟ್ಟ ಕೆಲಸವನ್ನು ನಾನುನೆರವೇರಿಸಿಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ. ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.

ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು. ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.

ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.

ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.

ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.

ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು. ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು. ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.

ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.

ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.

“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.

ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.

ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.

ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು; “ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.

ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;

ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.

ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.

ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ. “ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?

ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.

ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.

ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ. ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ. ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ, ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ, ಇನ್ನೊಮ್ಮೆ, “ಅನ್ಯಜನಾಂಗಗಳಿರಾ ದೇವರ ಜನರೊಡನೆ ಉಲ್ಲಾಸಪಡಿರಿ” ಎಂದೂ, ಮತ್ತೊಮ್ಮೆ, “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.

ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.

ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.

“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.

ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.

ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ, ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.

ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು, ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.

ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.

ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.

ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.

ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ. ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ. ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ. ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ, ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.

ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.

ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ, ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.

ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ, ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.

ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.

ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ. ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ. ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,

ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.

ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.

ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ. ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು. ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು. ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.

ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.

ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.

“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ, ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು. ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ,ನಾನು ಮೊದಲನೆಯವನೂ, ಕಡೆಯವನೂ, ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು. ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು. ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ. ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”

ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು. ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.

ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು, “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.

ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು, “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.

ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.

ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು. ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.

ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.

ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.

ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”

ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”

ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.

ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು. ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು. ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ. ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.

ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು. ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.

ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.

ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.

ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.

ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.

ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು, ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು. ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.

ನಾನೇಆದಿಯೂ, ಅಂತ್ಯವೂ,ಮೊದಲನೆಯವನೂ, ಕಡೆಯವನೂ,ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net