25 – ಹಣ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಹಣ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಹಣ.
“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ, ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.
”ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ. ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
”ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು. ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ,ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು. ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
”ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು. ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು. ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
”ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.
”ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.
”ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.
”ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.
”ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
”ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು; ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು. ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
”ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
”ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.
”ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು. ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.
”ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
”ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು. ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು. ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು. ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು. ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು. “ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು. ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು. ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.
”ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು.
”ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ. ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು.
”ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು. ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.
”“ಕದಿಯಬಾರದು.
”“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”
”ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
”ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.
”ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು. ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
”ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.
”“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
”ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,
”ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.
”ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು. ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು. ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.
”“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ, ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
”“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು. ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು. “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
”“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
”“‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು. ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
”“‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.
”ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು. ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು. ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
”“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು. ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು. ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು. ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು. ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
”“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
”ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು. ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
”“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
”ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
”ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು. ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು. ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
”ನಮ್ಮ ತಂದೆಗೆ ಗಂಡು ಮಗನಿಲ್ಲದ ಕಾರಣದಿಂದ ಅವನ ಹೆಸರು ಕುಲದಿಂದ ತೆಗೆದು ಹಾಕುವುದು ನ್ಯಾಯವೋ? ತಂದೆಯ ಕುಲದವರೊಂದಿಗೆ ನಮಗೂ ಸ್ವತ್ತನ್ನು ಕೊಡಬೇಕು” ಎಂದು ಕೇಳಿಕೊಂಡರು. ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು. ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ, “ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ. “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮಗನಿಲ್ಲದೆ ಸತ್ತರೆ ಅವನ ಸ್ವತ್ತು ಅವನ ಮಗಳಿಗೆ ಆಗಬೇಕು. ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು. ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”
”ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
”ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು.
”“ಕದಿಯಬಾರದು.
”“ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
”ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
”ನೀವು ಹೊಟ್ಟೆತುಂಬಾ ಊಟಮಾಡಿ, ಸುಖವಾಗಿದ್ದು ಒಳ್ಳೇ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ ನಿಮ್ಮ ದನಗಳೂ, ಆಡು ಕುರಿಗಳೂ, ನಿಮ್ಮ ಬೆಳ್ಳಿ ಮತ್ತು ಬಂಗಾರವೂ, ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ. ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ. ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ. ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.
”ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ. ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
”ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
”ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.
”ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
”ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು. ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.
”ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು. ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು. ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.
”ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.
”ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.
”ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ. ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
”ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
”ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.
”ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
”ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.
”ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು.
”ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.
”ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.
”ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
”ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ. ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು. ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.
”ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ. ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.
”ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು. ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.
”ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.
”ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.
”ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ. ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
”ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು. ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು. ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು. ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು. ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು. ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.
”ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು. ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.
”ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು. ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
”ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.
”ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು, ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ
”ಸೊಲೊಮೋನನಿಗೆ ಒಂದು ವರ್ಷದಲ್ಲಿ ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.
”ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ. ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು. ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
”ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು. ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು. ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ. ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
”ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು. ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ. ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು. ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು. ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
”ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು. ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.
”ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು. ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
”ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.
”ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.
”ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.
”ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ. ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ
”ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು. ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು. ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.
”ಪ್ರಭಾವ ಐಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ. ನೀನು ಸರ್ವಾಧಿಕಾರಿಯು. ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ. ಎಲ್ಲಾ ಮಹಿಮೆಗೂ, ಶಕ್ತಿಗೂ ನೀನೇ ಮೂಲನು.
”ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
”ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.
”ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ. ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
”ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
”ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು. ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
”ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು. ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು. ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು. ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು. ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು. ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು. ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು. ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ. ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿತೆಗೆದುಕೊಳ್ಳುವ ಈ ಪದ್ಧತಿಯನ್ನು ಬಿಟ್ಟುಬಿಡೋಣ. ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು. ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು. ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.
”ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ. ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು. ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು. ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು. ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು. ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.
”ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
”ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
”ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು. ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
”“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
”ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.
”ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
”ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.
”ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ. ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.
”ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.
”ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ. ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ. ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ. ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು. ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು. ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ. ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು. ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ. ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು.
”ದೇವರಿಂದ ಬರುವ ವಿಪತ್ತಿಗೆ ಹೆದರಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವುದಕ್ಕಾಗಲಿಲ್ಲ. ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ, ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,
”ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
”ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
”ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು.
”ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
”ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
”ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
”ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
”ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
”ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು.
”ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
”ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
”ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು. ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
”ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ. ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
”ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
”ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
”ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ. ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು. ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
”“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
”ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
”ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು. ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
”ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
”ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
”ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.
”ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.
”ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.
”ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
”ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
”ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ; ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.
”ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
”ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ. ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
”ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
”ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
”ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
”ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
”ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎಂದು ಹೇಳಬೇಡ.
”ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ, ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ. ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ, ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ; ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.
”ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.
”ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ. ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ. ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ. ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.
”ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು. ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ. ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ. ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
”ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.
”ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು. ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ. ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
”ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
”ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ. ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
”ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ. ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು. ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ. ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ. ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
”ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
”ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ. ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
”ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
”ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
”ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು. ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು. ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು. ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
”ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
”ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.
”ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು. ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
”ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
”ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ, ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.
”ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
”ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು. ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು. ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
”ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.
”ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
”ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
”ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
”ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
”ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
”ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
”ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ. ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
”ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
”ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು. ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು. ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು. ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
”ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು. ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
”ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ. ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
”ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ. ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು. ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
”ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
”ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ. ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
”ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ, ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
”ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ. ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
”ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
”ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ, ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
”ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ? ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
”ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
”ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು, ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
”ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?
”ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು. ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು. ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
”ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
”ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ. ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು. ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು. ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು. ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು. ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.
”ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.
”ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.
”ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.
”ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು. ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.
”ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು. ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
”ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.
”ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು. ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು. ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು. ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು. ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು. ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು. ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ. ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
”ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.
”ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
”ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
”ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.
”ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
”ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
”ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ. ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
”ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
”ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.
”“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
”ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
”ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.
”ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು. ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
”ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.
”ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
”“ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಮತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ,
”ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
”ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.
”ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.
”ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ. ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
”ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ, ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ, ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.
”ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ, ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
”ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
”ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ. “‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
”ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ. ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.” ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ನೀನು ನಿನ್ನನ್ನು ದೇವರಿಗೆ ಸಮಾನವಾಗಿಸಿಕೊಂಡಿರುವೆ. ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
”ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ. ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ. ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.
”ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು. ಯೆರೂಸಲೇಮಿನ ದೇವಾಲಯದಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತಂದೊಡನೆ ರಾಜನೂ, ಅವನ ಮುಖಂಡರೂ, ಪತ್ನಿಯರು ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
”ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.
”ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ. ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?
”ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು. ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
”ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ. ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
”“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ. ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ? ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
”ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.
”“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’ ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.
”ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.
”ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!
”‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
”ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.
”“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ. ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ. ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
”ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.
”“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
”ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
”ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು. ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು. ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.
”“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆಫಲದೊರೆಯುವುದಿಲ್ಲ. “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
”ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮತಪ್ಪುಗಳನ್ನು ಕ್ಷಮಿಸು.
”“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ, ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.
”“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನುದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
”“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು? ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ; ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
”“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
”ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
”ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
”ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ, ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
”ಮತ್ತುಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
”ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
”ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
”“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
”ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
”ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು. ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು. ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
”ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು. ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು. ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು. ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು. ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು. ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ? ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ, ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.
”ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
”ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು. ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು. ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.
”ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು. ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.
”“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು. ಅವನು ಪುನಃ ಸುಮಾರುಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು, ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು. ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತುಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು. ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು. ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು. ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು. ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ, ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು. ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ? ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ. ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು. ಹೀಗೆಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.
”ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು. ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.
”ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
”ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
”“ದೇವರ ರಾಜ್ಯವು ಹೇಗೆಂದರೆದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು. ಅವನು ಒಬ್ಬನಿಗೆ ಐದುತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು. ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು. ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು. ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು. ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು. ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು. ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ? ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ, ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು. ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
”ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. ಅದಕ್ಕೆ ಉತ್ತರವಾಗಿ ಅರಸನು,‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
”ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
”ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು. ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ? ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು. ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ. ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.
”“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು. ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.
”ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು. ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು. ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ. ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
”ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”
”“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
”ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು. ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ, ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು. ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು. ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು. ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು. ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.
”ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ. ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”
”ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
”ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.
”ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು. ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ,ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು. ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
”ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು. ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.
”ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು; ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.
”ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು. ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು. ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು. ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
”ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
”ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು. ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
”ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
”ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.
”ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು, ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು. ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
”ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.
”“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ. ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
”ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
”“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.
”ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ. ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
”ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
”ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
”ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
”ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.
”ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
”ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು. “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
”ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು, ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ, ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
”ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ, ‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು, ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು. “ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು. ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
”ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು. ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ನಿಮ್ಮಲ್ಲಿ ಯಾರಿಂದಾದೀತು? ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು. ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ. ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
”ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
”ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
”ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು. ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
”ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
”“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ. ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.
”ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು. ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು. ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಸೆಪಟ್ಟನು, ಆದರೂ ಯಾರೂ ಅವನಿಗೆ ಕೊಡಲಿಲ್ಲ. ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು, ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು. ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು, ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ, ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ. ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
”ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು. ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ. ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು, ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು, ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು. ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು. ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. “ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
”ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು. ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
”ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು. ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
”“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು. ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು. ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು. ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು. ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು, ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
”ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
”ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
”ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
”ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು. ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು, ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.
”ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು, ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ, ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು.
”ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
”ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು. ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು. ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು. ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು. ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು, ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು, ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು. ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ? ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ, ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು. ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು. ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ
”ಬಳಿಕ ಆತನು ದೇವಾಲಯಕ್ಕೆ ಹೋಗಿ ವ್ಯಾಪಾರಮಾಡುವವರನ್ನು ಹೊರಹಾಕುವುದಕ್ಕೆ ಪ್ರಾರಂಭಿಸಿ ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.
”ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು. ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು, ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
”ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು. ಆಗ ಒಬ್ಬ ಬಡ ವಿಧವೆಯು ಬಂದು ತಾಮ್ರದ ಚಿಕ್ಕ ನಾಣ್ಯಗಳನ್ನು ಹಾಕುವುದನ್ನು ಯೇಸು ಗಮನಿಸಿ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.
”ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು. ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು. ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
”ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.
”ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ.
”ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. “ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
”ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು, “ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು. ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು. ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ. ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
”ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
”ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು. ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು. ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
”ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,
”ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು. ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
”ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ. ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
”ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ? ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
”ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು, “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು. ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
”ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
”ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ. ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ. ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
”ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
”ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.
”ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
”ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
”ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.
”ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
”ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.
”ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
”ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
”ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು. ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
”ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು. ಇತರರಿಗೆ ಕಷ್ಟಪರಿಹಾರವೂ, ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ; ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು. ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.”
”ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.
”ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”
”ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ. ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ. ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.
”ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
”“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
”ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
”ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ
”ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
”ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
”ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.
”ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು. ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ. ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ. ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ. ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
”ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.
”ಯಾವಾಗಲೂ ಸಂತೋಷಿಸಿರಿ, ಎಡೆಬಿಡದೆ ಪ್ರಾರ್ಥನೆಮಾಡಿರಿ, ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
”ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
”ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
”ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
”ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ. ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
”ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
”ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
”ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,
”ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು. ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ. ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು. ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ. ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ. ಆದರೆ ಮೆಲ್ಕಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು. ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ. ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು. ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು. ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು.
”ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು. ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು. ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
”ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
”ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
”ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
”ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
”ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?
”ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
”ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.
”ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.
”“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ. ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.
”ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
”ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ. ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
”ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
”ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
”ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
”ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
”ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
”ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
”ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.
”ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು. ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.
”ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು. ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.
”“ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ, ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು. ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’
”ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’ ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,
”ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
”ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.
”