26 – ಸರ್ಕಾರ
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಸರ್ಕಾರ.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ಸರ್ಕಾರ.
ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.
”ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ? ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ. ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
”ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು, “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ. ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.
”ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
”ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
”ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
”ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ. ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು. “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು. ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
”ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
”ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
”ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು. ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ, ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು. ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು. ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.
”ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು. ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು. ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
”ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು. ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು. ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ. ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’ ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
”ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು. ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.
”ಯೆಹೋವನೇ ಯುಗಯುಗಾಂತರಗಳಲ್ಲಿಯೂ ಅರಸನಾಗಿ ಆಳುವವನು.”
”ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು. ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು. ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.
”ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
”ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು. ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
”ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.
”“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು. ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು. ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯೂ ಮತ್ತು ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಿಯೂ ಯಾರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನಾದರೂ ನಡೆಸದೆ ಎಲ್ಲರೂ ನನ್ನ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಬೇಕು. ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ. ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.
”“‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ. ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು. ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
”ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.
”ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ, ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು. ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ. ಅವನು ಅನೇಕ ಸ್ತ್ರೀಯರನ್ನು ಮದುವೆ ಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವುದಕ್ಕೆ ಅವಕಾಶವಾಗುವುದು. ಅವನು ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
”ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು. ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು. ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.
”ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.
”ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು. ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು.
”ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ಮನಸ್ಸಿಗೆ ಬಂದ ಹಾಗೆಯೇ ನಡೆದುಕೊಳ್ಳುತ್ತಿದ್ದನು.
”ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು. ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
”ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು. ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.
”ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು. ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ, “ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು. ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು. ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು. ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು. ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು. ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು. ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು. ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.
”ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.
”ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.
”ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
”ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.
”ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು. ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
”ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು. ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.
”ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು. ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
”ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
”ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.
”ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ. ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ. ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು. ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.
”ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು ಅವನು, “ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು, ಯೆಹೋವನನ್ನು ಅಂಟಿಕೊಂಡು, ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.
”ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.
”ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು. ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು. ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು ಸಮುವೇಲನು ಅವನನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಅವನು, “ಜನರು ಚದರಿಹೋಗುವುದನ್ನೂ, ನೀನು ನಿಯಮಿತಕಾಲದಲ್ಲಿ ಬಾರದಿರುವುದನ್ನೂ, ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನೂ ನೋಡಿದೆನು. ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು. ಆಗ ಸಮುವೇಲನು, “ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು. ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
”ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು. ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
”ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು. ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು. ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು
”ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
”ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು. ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,
”ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು. ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು. ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.
”ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು. ಇದಲ್ಲದೆ ದಾವೀದನು, “ಯೆಹೋವನ ಆಣೆ, ಅವನು ಯೆಹೋವನಿಂದ ಸಾಯುವನು, ಇಲ್ಲವೆ ಕಾಲ ತುಂಬಿದ ಮೇಲೆ ಮರಣ ಹೊಂದುವನು ಅಥವಾ ಯುದ್ಧದಲ್ಲಿ ಸಾಯುವನು. ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
”ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು. ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.
”ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.
”ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು. ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.
”ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
”ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
”ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು.
”ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು. ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
”ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು. ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.
”ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು, “ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ. ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು. ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ. ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು. ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು. ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ. ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.
”ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
”ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
”ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು. ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು. ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು. ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ. ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ. ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು. ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.
”ಇಸ್ರಾಯೇಲ್ ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು, ಅನ್ಯದೇವತೆಗಳನ್ನು ಸೇವಿಸಲೇ ಬಾರದೆಂದು ಆಜ್ಞಾಪಿಸಿದ್ದರೂ ಅವನು ಆತನ ಆಜ್ಞೆಗಳನ್ನು ಮೀರಿದ್ದರಿಂದ ಆತನು ಅವನ ಮೇಲೆ ಕೋಪಗೊಂಡನು. ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.
”ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು. ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
”ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು. ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
”ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
”ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.
”ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ. ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.
”ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
”ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು. ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ. ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.
”ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು. ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು. ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.
”ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು. ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.
”ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು. ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.
”ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.
”ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು. ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.
”ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು. ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
”ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು. ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
”ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು. ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು. ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.
”ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
”ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು. ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು. ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.
”ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು. ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
”ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ. ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ. ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ. ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು. ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು’ ಅನ್ನುತ್ತಾನೆ ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು. ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು.
”ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು. ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು. ಆದುದರಿಂದ ಯೆಹೋವನು ತಿಷ್ಬೀಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತಗ್ಗಿಸಿಕೊಂಡಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.
”ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು. ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
”ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು. ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
”ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು. ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.
”ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು. ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
”ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು. ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು. ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
”ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು. ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ. ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು. ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ. ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು. ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.
”ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು. ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು. ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು. ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು. ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು. ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳ ಹೊರತಾಗಿ ಬೇರೇನೂ ಸಿಕ್ಕಲಿಲ್ಲ. ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು. ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.
”ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ. ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು. ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು. ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು. ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು. ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು. ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.
”ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
”ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
”ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
”ಯಾಜಕನಾದ ಯೆಹೋಯಾದಾವನು ಯೆಹೋವಾಷನಿಗೆ ಬೋಧಕನಾಗಿದ್ದ ಕಾಲದಲ್ಲಿ ಅವನು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು. ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
”ಯೆಹೂದದ ಅರಸನೂ, ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನೇಳು ವರ್ಷ ಆಳ್ವಿಕೆ ಮಾಡಿದನು. ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೆಹೋವಾಷನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹದಿನಾರು ವರ್ಷ ಆಳಿದನು. ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ. ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ. ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
”ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು. ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು. ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ. ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು. ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
”ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು. ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು. ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.
”ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು. ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು. ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು. ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು. ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ. ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
”ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು. ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು. ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು. ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
”ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗನಾದ ಹೋಶೇಯನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂಭತ್ತು ವರ್ಷ ಆಳಿದನು. ಹೋಶೇಯನು ತನ್ನ ಪೂರ್ವಿಕರಾದ ಇಸ್ರಾಯೇಲರ ಅರಸರಷ್ಟು ಕೆಟ್ಟವನಾಗಿರಲಿಲ್ಲವಾದರೂ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
”ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು. ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆಯು ಇವನ ತಾಯಿ. ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು. ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ. ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
”ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು. ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು. ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.
”ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು. ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು. ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನ ಮಾತನ್ನು ಕೇಳು, ‘ಆತನು ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ.
”ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ. ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು. ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು. ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು. ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು
”ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.
”ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ. ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು. ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.
”ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ. ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
”ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು. ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು. ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು. ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು. ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ, “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
”ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು. ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
”ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು. ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ. ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
”ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ. ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
”ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ರೂಮನ ಪೆದಾಯನ ಮಗಳಾದ ಜೆಬೂದಾ ಎಂಬಾಕೆಯು ಅವನ ತಾಯಿ. ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
”ಯೆಹೋಯಾಖೀನನು ಅರಸನಾದಾಗ ಅವನು ಹದಿನೆಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ. ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
”ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು. ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ. ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು. ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.
”ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ. ಚಿದ್ಕೀಯನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.
”ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
”ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು. ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.
”ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ. ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
”ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು. ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.
”ಆತನು ನನಗೆ, ‘ನಿನ್ನ ಮಗನಾದ ಸೊಲೊಮೋನನೇ ನನ್ನ ಆಲಯವನ್ನೂ, ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ. ನಾನು ಅವನಿಗೆ ತಂದೆಯಾಗಿರುವೆನು. ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಕೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು ಎಂದು ಹೇಳಿದ್ದಾನೆ.’ ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.
”ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು. ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲ್ವತ್ತು ವರ್ಷ ಆಳಿದನು. ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.
”ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು. ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು. ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು. ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
”ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು. ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.
”ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು. ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು. ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು. ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು. ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
”ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ. ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ, ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
”ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.
”ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
”ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.
”ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು. ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು. ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು. ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.
”ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
”ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
”ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
”ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು. ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು. ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು. ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು.
”ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು. ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು. ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು, ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು. ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
”ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು. ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು. ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ. ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು. ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.
”ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು. ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.
”ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು. ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು. ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
”ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
”ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು. ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ. ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು. ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.
”ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ. ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು. ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.
”ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
”ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು. ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.
”ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು. ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು. ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
”ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ. ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
”ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು. ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
”ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.
”ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
”ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ. ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
”ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು. ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು. ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು. ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು. ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
”ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ. ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
”ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು. ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.
”ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು. ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು. ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು. ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.
”ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ. ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
”ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು. ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು. ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು. ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
”ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
”ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು. ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ, ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು. ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು. ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು. ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು. ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
”ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ. ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು. ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
”ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು. ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು. ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
”ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು. ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
”ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು. ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು. ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
”ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ. ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು. ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು. ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು. ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ, “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
”ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು; ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ. ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ, “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
”ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು. ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
”ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
”ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
”ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
”ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
”ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು. ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
”ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ. ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು. ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು. ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು. ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
”ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
”ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು. ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.
”ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
”ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು. ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ. ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು. ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.
”ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು. ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು. ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು. ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.
”ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು. ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.
”ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?
”ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?
”ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ?
”ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ? ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ. ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
”“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು. ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು. ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು. ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ. ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
”ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.
”ಯೆಹೋವನು ಯುಗಯುಗಾಂತರಗಳಲ್ಲಿಯೂ ಅರಸನಾಗಿರುವನು; ಆತನ ದೇಶದಲ್ಲಿ ಅನ್ಯಜನಗಳು ನಿಶ್ಶೇಷರಾದರು.
”ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
”ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು. ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.
”ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.
”ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ. ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ. ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
”ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
”ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
”ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.
”ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,
”ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು. ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.
”ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ. ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
”ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು. ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ. ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು. ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು. ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು. ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.
”ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ. ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ. ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
”ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
”ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
”ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
”ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ. ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?
”ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ. ಆಕಾಶವು ಉನ್ನತ, ಭೂಮಿಯು ಅಗಾಧ, ರಾಜರ ಹೃದಯವು ಅಗೋಚರ. ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು. ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು. ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ. ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
”ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ. ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
”ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ. ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು. ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
”ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ. ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು. ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.
”ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ. ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.
”ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ. ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು. ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
”ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.
”ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು. ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ. ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
”ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು. ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
”ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
”“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
”ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
”ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು. ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
”ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು! ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
”ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
”ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
”ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
”ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.
”ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
”ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.
”ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
”ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.
”ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
”ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
”ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
”ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.
”ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು, “ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ. ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ, ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು. ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ, ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
”ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ. ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
”ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು. ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ. ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು. ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.
”ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
”ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
”ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು. ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
”ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
”ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.” ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
”ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
”“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ. ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ. “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು. “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು. “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು. ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು. ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ. “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು. ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
”ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, “ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ ಧೂಪ ಹಾಕಬೇಕು” ಎಂದು ಆಜ್ಞಾಪಿಸಿದನು. ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು. ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು. ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.
”ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು. ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು. ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ. ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು. ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು. ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
”ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು! ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ. “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ. ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು. ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ? “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
”ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ. ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು. ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು. ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು. ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು. ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು. ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು. ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
”ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು. ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು. ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು. ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
”ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ. ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು. ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
”ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ. ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”
”ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
”ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
”ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.
”ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು. ಹನ್ನೆರಡು ತಿಂಗಳು ಕಳೆದನಂತರ ಅವನು ಬಾಬೆಲಿನ ಅರಮನೆಯ ಮಹಡಿಯ ಮೇಲೆ ತಿರುಗಾಡುತ್ತಾ, “ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು. ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು; ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು. ಈ ನುಡಿಯು ನೆಬೂಕದ್ನೆಚ್ಚರನಲ್ಲಿ ತಕ್ಷಣವೇ ನೆರವೇರಿತು; ಅವನು ಮನುಷ್ಯರೊಳಗಿಂದ ತಳ್ಳಲ್ಪಟ್ಟು, ಎತ್ತುಗಳಂತೆ ಹುಲ್ಲು ಮೇಯುತ್ತಾ, ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದನು; ಅವನ ಕೂದಲು ಹದ್ದುಗಳ ಗರಿಯಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನ ಹಾಗೂ ಬೆಳೆದವು.
”ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು. ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು. ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು. ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
”“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.
”ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು. ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು. “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು. ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
”“ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ. ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ. ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು. “ಬರೆದ ಬರಹವು ಇದೇ, ‘ಮೆನೇ, ಮೆನೇ, ತೆಕೇಲ್, ಉಫರ್ಸಿನ್.’ ಇದರ ಅರ್ಥವು ಹೀಗಿದೆ, ಮೆನೇ ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ. ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ. ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು. ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು. ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು. ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.
”ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು. ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು. ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು. ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ. ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು. ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು! ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ. ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು. ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.
”ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು. ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು. ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು. ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು. ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.
”ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು. ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು. ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
”ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು. ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು. ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
”ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು. ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ! “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು; ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.” ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.
”ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
”‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು. ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
”ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು. ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
”ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು. ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.
”ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು. ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.
”ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
”ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.
”“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.
”ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
”ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು? ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳಲ್ಲೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜನನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ; ನಿನ್ನನ್ನು ರಕ್ಷಿಸಬಲ್ಲ ನಗರಪಾಲಕರು ಎಲ್ಲಿ? ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ಅವರನ್ನು ತೆಗೆದು ಹಾಕಿದ್ದೇನೆ.
”ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
”ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ? ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ. ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.
”ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ, ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.
”ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
”ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
”ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
”ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು. ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ. ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು. ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
”ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು, “ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು. ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು. ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು. ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ, “‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.
”ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು. ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು. ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.
”ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
”ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ, ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು. ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
”“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನುದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
”ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
”ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು. ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು. ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.
”ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
”ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ, ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
”ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು. ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು. ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು. ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು. ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ, ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
”ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು. ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು. ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ. ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
”ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
”ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
”ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ. “ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
”ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ. ಅನಂತರ ಇಬ್ಬರು ಮುಂದೆ ಬಂದು,
”ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು, “ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.
”ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು. ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ, ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು. ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
”ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
”ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
”ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
”ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
”ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು, “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
”ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು. ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು. ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.
”ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು. ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು. ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು. ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ, ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ. ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು. ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು. ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
”ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು. ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು. ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು. ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
”ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
”“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು. “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
”ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು. ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ. ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
”ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ? ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
”ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು. ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು. ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು. ಆದರೆ ಯೇಸು ಏನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು.
”ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು, “ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?” ಎಂದು ಅವರನ್ನು ಕೇಳಿದನು.
”ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು. ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಮತ್ತಷ್ಟು ಕೂಗಿಕೊಂಡರು.
”ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು. ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು. ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು. ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
”“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.
”ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
”ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.
”ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.
”ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ ಅನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಮರುಭೂಮಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು.
”ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ, ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.
”ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ, ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು. ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.
”ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
”ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.
”ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
”ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.
”ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು. ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು, ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು. ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
”ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
”ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.
”ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು. ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು. ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು, “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.
”“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು. ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು. ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.
”ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ, “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು. ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
”ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
”ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
”ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು. ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು. ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
”ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
”ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.
”ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
”ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು. ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ, ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು. ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ. ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
”ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.
”ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು, ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ. ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು. ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು. ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
”ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು. ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
”ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು. ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು. ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು. ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.
”ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು. ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
”ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು. ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ, ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು? ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ? ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು, ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು. ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
”ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು, ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
”ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು, “ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು. ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು. ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು, “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು. ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು. ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು. ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ. ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ, “ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು. ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
”ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
”ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು. ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು. ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು. ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
”ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು. ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು. ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು. ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು. ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು. ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು. ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು. ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
”ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
”ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು. ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು. ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು. ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
”ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು. ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು. ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
”ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು. ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು. ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
”ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು. ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು. ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು. ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು. ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.
”ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ. ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು. ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
”ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
”ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು. ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು. ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು, ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು. ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು. ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು. ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
”ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು. ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ; “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು. ಹತ್ತಿರ ನಿಂತಿದ್ದವರು; “ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?” ಅನ್ನಲು, ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.
”ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು. ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು. ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು. ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು. ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
”ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು. ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು, ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು. ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು; “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ. ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು. ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.
”ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ. ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
”ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ. ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ. ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು. ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು. ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ; “ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.
”ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು; ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
”ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು. ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು. ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು. ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.
”ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು. ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
”ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;
”“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.
”“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
”ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
”ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
”ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ. ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.
”ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
”“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
”ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
”ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
”ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
”ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.
”ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
”ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
”ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
”ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
”ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
”ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು. ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು, ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
”ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
”ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
”ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,
”ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
”ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ, ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
”ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.
”ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
”ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
”ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
”ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
”ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ. ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ. ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ. ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.
”ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು. ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು.
”ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.
”ಪಾಪಮಾಡುವ ಪ್ರತಿಯೊಬ್ಬನೂ ಅಧರ್ಮವನ್ನು ಮಾಡುವವನಾಗಿದ್ದಾನೆ; ಪಾಪವು ಅಧರ್ಮವೇ.
”ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
”ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.
”ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
”ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು. ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು. ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
”ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
”ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.” ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು. ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.
”ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,
”ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.
”ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು, “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ. ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.
”ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
”ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
”ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು. ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
”ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.
”“ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ. ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.
”ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.” ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು. ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು. ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು. ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”
”ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು. ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.
”“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.
”ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.
”ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
”ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.
”ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ, ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು. ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.
”ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
”ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
”ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
”ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು, ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು. ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು. ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.
”