27 – ನೋವು
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ನೋವು.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ನೋವು.
ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು. ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
”ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.
”ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ. ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
”ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
”ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು. ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು. ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
”ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ. ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.
”ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.
”ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
”ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.
”ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.
”“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
”ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
”ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ, ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು. ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.
”ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ. ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.
”ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
”ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ. ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
”ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
”ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ. ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ, ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.
”ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
”ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
”ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.
”ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
”ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
”ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.
”ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
”ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.
”“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ. ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ. ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
”ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.
”ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು. ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು. “ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು. ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು. “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ. ಇದಲ್ಲದೆ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಿಸಿದ್ದೇನೆ, ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರನ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿಯೂ, ನನ್ನ ಸೇವಕನಾದ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು” ಅಂದನು.
”ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ. ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ. ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,
”ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು. ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
”ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
”ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು. ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು. ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು. ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು. ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ, ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು. ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
”“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
”ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು. ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು. ಯೆಹೋವನು ಸೈತಾನನಿಗೆ, “ನೋಡು, ಅವನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು. ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.
”ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು. ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
”ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು. ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.
”ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ. ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.
”ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ. ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?
”ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.
”ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.
”ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು.
”ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.
”ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ. ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು. ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ. ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.
”ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.
”ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.
”ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.
”ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.”
”ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.
”ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.
”ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ. ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.
”ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ. ಸಂತೈಸುವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ. ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ. ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.
”ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು. ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು. ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು. ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.
”ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ, ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?
”ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು. ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.
”ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ. ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
”ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ. ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.
”ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
”ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
”ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
”ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
”ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.
”ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು? ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
”ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ. ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು. ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
”ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ. ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ. ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ. ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ. ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು. ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
”ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
”ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
”ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು. ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು. ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
”ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು. ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು. ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
”ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
”ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
”ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ. ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
”“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು? ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು. ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
”ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
”ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು. ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ. ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.
”ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
”ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು. ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ
”ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
”ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
”ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ. ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
”ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ. ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
”ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
”ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ. ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
”ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
”ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
”ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ. ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.
”ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
”ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
”ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ. ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
”ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.
”ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
”1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.
”“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.
”ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.
”ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
”ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
”ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
”ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ, “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
”ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
”ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
”ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು? ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
”ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.
”ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು? ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
”ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ. ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.
”ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು. ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು. ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು. ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ. ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
”ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ
”ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ. ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು. ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು. ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು. ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು. ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು. ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.
”ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ. ಒಬ್ಬೊಂಟಿಗರನ್ನು ಸಂಸಾರಿಕರಾಗುವಂತೆ ಮಾಡುತ್ತಾನೆ; ಸೆರೆಯಲ್ಲಿರುವವರನ್ನು ಬಿಡಿಸಿ ಸುಖಾವಸ್ಥೆಗೆ ತರುತ್ತಾನೆ. ದ್ರೋಹಿಗಳಾದರೋ ಮರುಭೂಮಿಯಲ್ಲಿ ಉಳಿಯಬೇಕಾಗುವುದು.
”ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು. ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು? ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು. ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು. ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು. ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.
”ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು, ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ. ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ. ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.
”ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
”ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ. ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ! ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ
”ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
”ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.
”ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ. ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ
”ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ. ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
”ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು. ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು. ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ. ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ. ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ, ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ. ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
”ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ. ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು. ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ. ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು. ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು; ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.
”ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
”ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.
”ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
”ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಕೂಗು ನಿನಗೆ ಮುಟ್ಟಲಿ. ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ. ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು. ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.
”ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ. ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.
”ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ, ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.
”ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ. ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ. ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
”ಆತನು ಅವರನ್ನು ಅನೇಕಾವರ್ತಿ ರಕ್ಷಿಸಿದರೂ, ಅವರು ತಮ್ಮ ಆಲೋಚನೆಯನ್ನೇ ಅನುಸರಿಸಿ ಅವಿಧೇಯರಾದರು; ತಮ್ಮ ಅಕ್ರಮದಿಂದಲೇ ಹೀನಸ್ಥಿತಿಗೆ ಬಂದರು. ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು. ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.
”ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು. ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
”ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ. ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು. ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ, ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು. ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
”ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು. ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು. ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
”ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ. ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು, ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
”ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
”ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು. ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?
”ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು. ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
”ನಾನು ಸಾಯುವುದಿಲ್ಲ; ಜೀವದಿಂದಿದ್ದು ಯೆಹೋವನ ಕ್ರಿಯೆಗಳನ್ನು ಸಾರುವೆನು.
”ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.
”ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
”ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.
”ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ, ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
”ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.
”ಕಷ್ಟಾನುಭವವು ಹಿತಕರವಾಯಿತು, ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
”ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ. ನಿನ್ನ ಸೇವಕನಿಗೆ ನುಡಿದ ಪ್ರಕಾರ, ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು. ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.
”ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ, ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು. ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
”ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ, ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
”ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ, ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.
”ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.
”ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
”ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
”ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
”ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ. ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು. ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ. ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ
”ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.
”ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು. ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು. ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ. ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ. ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ. ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ. ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
”ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.
”ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ. ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ. ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.
”ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
”ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.
”ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು. ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.
”ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
”ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
”ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
”ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
”ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
”ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
”ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ. ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.
”ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು. ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ. ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
”ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ, ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ, ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
”ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು. ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು. ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
”ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
”ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
”ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.
”ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.
”ಆದುದ್ದರಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.
”ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ. ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
”ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
”ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
”ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ. ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
”ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.
”ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ. ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
”ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ. ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ. ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು. ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.
”ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು. ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
”“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.
”ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
”ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ. ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
”ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
”ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.
”ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ. ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
”ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.
”ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
”ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
”ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.
”ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”
”ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
”ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.
”ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು. ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
”ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ. ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.
”“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
”ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
”ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
”ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
”ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
”ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
”ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.” ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.
”ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
”ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು. ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು, ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು. ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.
”ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
”ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
”“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು. ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
”ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.
”ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು. ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”
”ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
”ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
”ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
”ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ. ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.
”ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
”ನಾನು ಅಲೆದು ಕಷ್ಟಪಟ್ಟದ್ದನ್ನು ನೆನಪಿಗೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕಮಾಡಿಕೋ. ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.
”ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು. ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು! “ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ. ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
”ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು. ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.
”ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ. ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.
”ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.
”ಅವುಗಳನ್ನು ಒಳ್ಳೆಯ ಮೇವಿನಿಂದ ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಾಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅವು ಒಳ್ಳೆಯ ಮಂದೆಯಲ್ಲಿ ಮಲಗಿ; ಇಸ್ರಾಯೇಲಿನ ಪರ್ವತಗಳಲ್ಲಿ ಪುಷ್ಟಿಯುಳ್ಳ ಮೇವನ್ನು ಮೇಯುವವು. ನಾನೇ ನನ್ನ ಕುರಿಗಳನ್ನು ಮೇಯಿಸಿ, ಹಾಯಾಗಿ ಮಲಗುವಂತೆ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ. “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”
”ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
”ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು. ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
”ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
”ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.
”ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.
”ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು. ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
”“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.
”ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
”ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
”ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ, “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.
”ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
”“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
”ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
”ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ;ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.
”“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು? ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ; ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
”“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
”ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು. ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.
”ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು, “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು. ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು, ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು. ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು; ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು. ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
”ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
”ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು. ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
”ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು. ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು. ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
”ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ. ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು. ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಆ ದೆವ್ವಗಳು, “ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು” ಎಂದು ಬೇಡಿಕೊಂಡವು. ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.
”ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ? ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ? ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು. ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
”ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.
”ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.
”ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ, “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು. ಜನರನ್ನು ಹೊರಕ್ಕೆ ಕಳುಹಿಸಿದ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈ ಹಿಡಿಯಲು ಆಕೆ ಎದ್ದಳು.
”ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು. ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು. ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.
”ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು. ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.
”ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
”ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
”ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
”ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು. ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
”ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
”ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
”“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
”ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು. ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ? ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು. ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
”ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.
”ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
”ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
”ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
”ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು. ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
”ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು. ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು. ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು. ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು. ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು. ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
”ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು. ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
”ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ, “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು. ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು. ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
”ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
”ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.
”ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
”ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು. ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು. ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು. ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು. ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
”ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.
”ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು. ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
”“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು. ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
”ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
”ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
”ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.
”ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು. ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು. ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
”ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
”ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
”ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
”ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು. ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
”ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು. ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
”ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು. ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು. ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
”ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು. ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
”ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು. ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
”ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
”ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು. ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು. ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು. ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
”ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು. ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
”ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ, ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
”“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
”ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು. ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು
”ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು. ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು, ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು. ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ, ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು. ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
”ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
”ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು. ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು. ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು, ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ, ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ. ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.
”ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
”ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
”ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು. ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
”ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ, ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು. ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು. ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
”ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು. ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ, ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ. ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು. ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು. ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
”ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು. ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು. ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು. ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
”ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ. ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು. ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು. ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು. ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ; ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು. ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು. ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು. ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು. ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು. ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
”ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
”ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು. ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು. ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು. ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು. ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು. ಯೇಸು ಅವನಿಗೆ, “ಹೋಗು,ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.
”ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
”“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು. “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು, ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು, ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
”ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
”ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು. ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು. “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
”ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
”ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು. ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.
”ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.
”“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
”“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
”ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು. ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು. ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
”ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು. ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
”ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
”ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
”ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
”ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು. ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು. ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು. ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು. ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು? ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ? ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
”ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು; ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
”ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು. ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು. ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ, ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
”ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
”ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
”ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು. ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. ಅವರು ಯೇಸುವಿನ ಬಳಿಗೆ ಬಂದು, “ನಿನ್ನಿಂದ ಇಂಥ ಉಪಕಾರ ಹೊಂದುವುದಕ್ಕೆ ಅವನು ಯೋಗ್ಯನು, ಅವನು ನಮ್ಮ ದೇಶವನ್ನು ಪ್ರೀತಿಸಿ ಪ್ರಾರ್ಥನೆಗಾಗಿ ನಮಗೆ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿರುವನು” ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು, ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ. ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು. ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು. ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು.
”ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು. ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ, ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು. ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
”ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.
”ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
”ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು. ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
”ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು. ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು. ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು. ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು. ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು. ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು, ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
”ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
”ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು. ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು. ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ. ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು, ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು. ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.
”ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು, ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
”ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.
”ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
”ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು. ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು. ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
”ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
”ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
”ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
”ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
”ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
”ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು. ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲು ನಿಮ್ಮಲ್ಲಿ ಯಾರಿಂದಾದೀತು? ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು. ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ. ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು. ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
”ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
”ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
”ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
”ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
”ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು. ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
”ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,
”“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು. ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು. ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು. ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು. ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು, ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು. ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
”ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, “ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು. ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
”ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
”ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು, ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು. ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ, ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು. ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ, ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು. ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು. ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
”ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
”ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
”ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.
”ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.
”“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು. ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು. ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,
”ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
”ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
”ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
”ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
”“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
”ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು. ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು. ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು. ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು. ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು. ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
”ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.) ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು. ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು. ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು. ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,
”ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
”ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
”ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ. ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
”ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.
”ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು. ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು. ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು. ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು. ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು. ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
”ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.
”ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. “ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
”ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು.ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.
”ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ,
”ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು. ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು, “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು. ಯೇಸು ಕಣ್ಣೀರಿಟ್ಟನು. ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
”ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು. ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು. ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
”“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
”ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
”“ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
”ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು. ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.
”ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
”ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ. ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
”ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
”ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.
”ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು. ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ. ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.
”ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
”“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
”ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
”ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು; ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
”ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ, ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು. ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
”ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು. ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
”ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು, ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು. ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು, “ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
”ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.
”ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು. ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
”ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು. ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
”ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
”ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು. ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು. ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
”ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
”ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು. ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
”ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು. ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು. ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
”ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ, ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
”ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.
”ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು. ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು. ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.
”ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
”ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು. ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.
”ಅವನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ ಪ್ರಾರ್ಥನೆ ಮಾಡಿ ಅವನ ಮೇಲೆ ಕೈಗಳನ್ನಿಟ್ಟು ಅವನನ್ನು ಗುಣಪಡಿಸಿದನು. ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.
”ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
”ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
”ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
”ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
”ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
”ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
”ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
”ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?
”ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು. ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು. ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
”ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ. ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ. ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
”ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ. ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ. ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ. ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
”ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ. ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ. ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ, ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ. ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ. ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
”ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
”ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
”ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
”ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.
”ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ. ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
”ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ. ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
”ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.
”“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ. ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
”ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
”ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ. ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ. ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ. ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
”ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
”ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
”ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.
”ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.
”ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
”ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.
”ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
”ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.
”ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”
”ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ. ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ. ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ. ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
”ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು. ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು. ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
”ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.
”ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ. ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ. ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
”ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
”ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ. ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.
”ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು. ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.
”ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
”ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ, ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ. ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,
”ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ, ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
”ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ. ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.
”ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.
”ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ. ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.
”ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
”ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
”ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು. ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು. ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು. ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ? ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ.
”ಅವನನ್ನು ಕುರಿತಾಗಿ ನಾನು ಹೆಮ್ಮೆ ಪಡುವೆನು. ಆದರೆ ನನ್ನನ್ನು ಕುರಿತಂತೆ ನನ್ನ ಬಲಹೀನತೆಯನ್ನು ಕುರಿತಲ್ಲದೆ ಬೇರೆ ಹೊಗಳಿಕೆ ನನಗೆ ಇಲ್ಲ.
”ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು,ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
”ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
”ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
”ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
”ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು
”ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.
”ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
”ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
”ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ. ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
”ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ. ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
”ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
”ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.
”ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
”ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
”ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
”ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ. ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
”ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ. ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ. ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
”ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.
”ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ, ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ. ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
”ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
”ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
”ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
”ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.
”ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು. ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.
”ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.
”ಯಾವಾಗಲೂ ಸಂತೋಷಿಸಿರಿ, ಎಡೆಬಿಡದೆ ಪ್ರಾರ್ಥನೆಮಾಡಿರಿ, ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
”ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ. ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
”ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
”ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.
”ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
”ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.
”ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
”ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
”ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ. ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
”ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು, ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
”ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ, ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು. ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
”ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
”ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ. ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
”ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ. ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
”ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.
”ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,
”ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ
”ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ, ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
”ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.
”ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ. ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ. ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ. “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ. ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು. ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!” ಎಂದು ಹೇಳುತ್ತಾನಷ್ಟೆ. ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ. ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
”ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
”ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
”ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ. ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ. ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”
”ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.
”ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.
”ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು. ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು. ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು. ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು.
”ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ. ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.
”ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ. ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
”ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ. ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.” ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ. ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
”ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ. ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
”ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
”ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ. ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
”ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ. ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
”ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
”ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
”ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
”ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ. ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
”ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ. ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
”ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.
”ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
”ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
”ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ. ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
”ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.
”ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ. ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು. ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.
”ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.
”ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
”ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ. ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
”ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
”ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.
”ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
”ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
”ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
”ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
”ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
”ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
”ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.
”ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.
”“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು,ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂಹೇಳುವುದೇನಂದರೆ, ನಾನು ನಿನ್ನ ಸಂಕಟವನ್ನೂನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನಸಭಾಮಂದಿರದವರಾಗಿದ್ದಾರೆ. ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತುಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.ನೀನು ಸಾಯುವ ತನಕನಂಬಿಗಸ್ತನಾಗಿರು, ನಾನು ನಿನಗೆಜೀವದ ಕಿರೀಟವನ್ನು ಕೊಡುವೆನು.
”ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಜಯಹೊಂದುವವನಿಗೆಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
”ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು.ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
”ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ,ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
”ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
”ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
”ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”
”ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ. ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು. ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
”ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.
”ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ. ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
”“ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.
”ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
”ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.
”