28 – ದೇವದೂತರು

ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ದೇವದೂತರು.

ಟಾಪ್ 3 ಅತ್ಯಂತ ಮಹತ್ವದ ಪದ್ಯಗಳು

ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.

ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.

ಕ್ಯಾನೊನಿಕಲ್ ಕ್ರಮದಲ್ಲಿ ಪ್ರತಿ ವಚನ - 182 ಭಾಗಗಳು

ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.

ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು. ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು. ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.

ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು. ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.

ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು. ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ. ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು. ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.

ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು. ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.

ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.

ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ

ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು. ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.

ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ. ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು.

ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.

ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.

ನನ್ನ ದೂತನು ನಿಮ್ಮ ಮುಂದಾಗಿ ಹೊರಟು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು, ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲಮಾಡುವೆನು.

ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು. ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು. ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು. ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.

ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”

ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.

ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.

ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.

ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು. ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು. ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು. ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು. ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು. ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು. ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು. ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.

ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು. ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ. ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು. ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು. ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.

ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.

ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.

ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.

ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.

ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು. ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.

ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು. ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು. ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.

ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು. ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.

ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು. ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು. ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು. ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ

ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.

ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.

ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು. ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.

ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.

ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.

ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು. ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.

ಆದರೂ ದಾವೀದನು ಯೆಹೋವನ ದೂತನ ಕತ್ತಿಗೆ ಹೆದರಿ ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನು ಅರ್ಪಿಸಿದನು. ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರ ದೊರಕಿತು.

ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು. ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.

ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು. ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.

ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.

ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.

ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,

ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.

ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ಅಟ್ಟಿಬಿಡಲಿ. ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ. ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.

ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.

ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು. ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.

ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.

ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.

ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ. ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.

ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.

ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.

ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು. ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು. ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು, ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು, ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.

“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.

ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ. ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು. ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು. ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು. ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು. ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ, ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು. ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು. ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು. ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.

ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು. ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು. ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ. ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು; ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು; ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.

ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು. ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು. ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.

ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.

ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು. ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು. ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು. ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು. ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು. ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ” ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು. ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು. ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.

ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು. ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು. ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ. ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು. ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂಬುದೇ. ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು, ಎರಡನೆಯದು ಮನುಷ್ಯನದು, ಮೂರನೆಯದು ಸಿಂಹದ್ದು, ನಾಲ್ಕನೆಯದು ಗರುಡಪಕ್ಷಿಯದು. ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ. ಕೆರೂಬಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವುಗಳ ಸಂಗಡಲೇ ಏರಿದವು. ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.

ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು. ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಪೂರ್ವ ಬಾಗಿಲಿನ ಮುಂದೆ ನಿಂತವು, ಅವುಗಳ ಮೇಲ್ಗಡೆ ಇಸ್ರಾಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು. ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.

ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.

ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು. ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು. ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು. ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು. ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು. ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.

ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,

ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು. ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.

ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು. ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.

ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು. ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು. ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು. ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ, ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.

ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು. ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ. ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು. ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು. ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ” ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು. ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”

“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ. ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ. ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು. ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ. ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ. ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ; ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ. ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ. ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ. ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?

“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು. ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು. ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು. ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು. ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು, ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು. ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.

ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು. ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು. ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು, “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು. ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.

ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು. ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು. ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು, ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು. “ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು. ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.

ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, “ನನ್ನ ಸ್ವಾಮೀ ಇದೇನು?” ಎಂದೆನು. ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.

ಜ್ಞಾನಿಗಳು ಹೋದ ಮೇಲೆ ದೇವದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ, ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಓಡಿಹೋಗು, ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು” ಎಂದನು.

ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.

ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.

ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು

ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.

ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.

ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.

ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.

“ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,

“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;

ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?

ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು. ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.

ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.

ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”

“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.

ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.

ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು. ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು. ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.

ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು; ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು. ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು. ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು. ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು. ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು. ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.

ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ, ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು. ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,

‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು; ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.

ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.

“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.

ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.

ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.

ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.

ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು. ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು? ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು.

ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)

ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು, ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.

ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.

ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು. ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು, “ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.

ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು.

ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು. ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು. ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು. ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು. ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು. ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.

ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು. ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು. ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.

ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು; ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.

ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.

ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.

ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.

ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.

ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”

ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.

ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?

ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ. “ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು? ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.

ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.

ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.

ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ, ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,

ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.

ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.

ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.

ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳದೂತರು, ಆ ಏಳು ದೀಪಸ್ತಂಭಗಳು ಅಂದರೆಆ ಏಳು ಸಭೆಗಳು.”

ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು.ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ,ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.

ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.

ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.

ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ. ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.

ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು. ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.

ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು. ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.

ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು, “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು. ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.

ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು. ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.

ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.

ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.

ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು. ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ, ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.

ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.

ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು, “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.

ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು. ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.

ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು. ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು. ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು. ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.

ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು. ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು. ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.

ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.

ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು. ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು. ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು. ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು. ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು. ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು. ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು. ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ. ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ. ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.

ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.

ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು. ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.

ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.

ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು.

ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,

ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.

ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ, ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.

ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.

ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.

“ಯೇಸುವೆಂಬ ನಾನುನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನುದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂಅವನ ಸಂತತಿಯೂಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”

Kannada - ಕನ್ನಡ - KN

KNIRV'19 - Kannada Indian Revised Version - 2019

This Bible text is from Kannada Indian Revised Version IRV 2019
https://open.bible/bibles/kannada-bridge-text-bible/
provided by: Bridge Connectivity Solutions Pvt Ltd, available by Creative Commons CC-BY-SA-4.0,
and this new compilation is shared as www.creativecommons.org/licenses/by-sa/4.0.
Languages are made available to you by www.ipedge.net