30 – ದಿ ರಾಪ್ಚರ್
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ದಿ ರಾಪ್ಚರ್.
ಇವು ಸರ್ವಶಕ್ತನಾದ ದೇವರ ಪವಿತ್ರ ಮಾತುಗಳು.
ಮಾನವರ ಮಾತುಗಳಲ್ಲಿ ನಮಗೆ ಆಸಕ್ತಿ ಇಲ್ಲ.
ದೇವರನ್ನು ಪ್ರೀತಿಸುವ ಯಾರಿಗಾದರೂ... ದೇವರು ಇದರ ಬಗ್ಗೆ ಹೀಗೆ ಹೇಳುತ್ತಾನೆ: ದಿ ರಾಪ್ಚರ್.
“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
”ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
”ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ. ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
”ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
”ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು. ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು. ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.
”ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು. ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.
”ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಭೂಮಿಯಲ್ಲಿ ಅವಿತುಕೋ. ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ, ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ, ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ, ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು. ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು. ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು. ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು. ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
”ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು. ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
”ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
”ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು. ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು. ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು. ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು. ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ. ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು. ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು. ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.
”ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
”ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ. ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು. ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು. ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು. ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ. ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು. ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ. ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು. ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.
”ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
”ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
”ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.
”“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
”“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.
”ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”
”“‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು. ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು. “‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.
”ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
”ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.
”“ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು. ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ, ಕಾಲುಗಳು ಕಬ್ಬಿಣ, ಪಾದಗಳು ಕಬ್ಬಿಣ ಮತ್ತು ಮಣ್ಣು. “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು. ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.
”“ಕನಸು ಇದೇ; ಇದರ ಅರ್ಥವನ್ನೂ ನಿನ್ನಲ್ಲಿ ಅರಿಕೆಮಾಡುತ್ತೇನೆ. ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ. ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ. “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.
”“ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು. “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು. ಕಾಲ್ಬೆರಳುಗಳ ಒಂದಂಶವು ಕಬ್ಬಿಣ, ಒಂದಂಶವು ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶವು ಗಟ್ಟಿ, ಒಂದಂಶವು ಜೊಂಡಾಗಿರುವುದು. ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀನು ನೋಡಿದ ಮೇರೆಗೆ, ಆ ರಾಜ್ಯಾಗಳ ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು. ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕೂಡಿಕೊಳ್ಳುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಹೊಂದಿಕೊಳ್ಳುವುದಿಲ್ಲ.
”“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು. ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.
”ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು. ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು. ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು. ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು. ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು. ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು. ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
”“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
”ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು. ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.
”ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
”‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು. ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
”ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು. ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
”ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು. ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು. ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು. ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು. ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
”ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು. ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು. ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು. ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು. ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು. ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು.
”ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು. ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು. ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು. ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ, “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.
”ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು. ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು. ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು. ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
”ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ. ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ. ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು. ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”
”ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.
”ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು. ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
”ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು. ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು. ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು. ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು. ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.
”ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.
”“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು. ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು. ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು. ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವುದು; ಬಹಳ ಜನರ ಮೇಲೆ ಆಳ್ವಿಕೆಯನ್ನು ನಡೆಸುವನು; ದೇಶವನ್ನು ಕ್ರಯಕ್ಕೆ ಹಂಚುವನು.
”“ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು. ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು. ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತ ದೇಶವೂ ತನ್ನನ್ನು ರಕ್ಷಿಸಿಕೊಳ್ಳದು. ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು. ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು. ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”
”“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು. ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು. ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು. ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
”ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು. ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು. ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
”ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು, ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು. ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
”ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು. ಕಾದುಕೊಂಡು, ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳುವವನು ಧನ್ಯನು. ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.
”ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.
”ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ. ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ. ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು. ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ. ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ. ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ; ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ. ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ. ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ. ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?
”ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು. ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.
”ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು. ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
”ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ. ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ. ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ. ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
”ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ. ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು. ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ. ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು. ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
”ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು. ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು. ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ. ಒಬ್ಬೊಬ್ಬನು ತನ್ನ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರನ್ನು ಯಾರೂ ಹೆದರಿಸರು. ಸೇನಾಧೀಶ್ವರನಾದ ಯೆಹೋವನೇ ಇದನ್ನು ನುಡಿದಿದ್ದಾನೆ.
”ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ! ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ! ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ. ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು! ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!
”ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.
”“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
”ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
”ಆಹಾ, ಚೀಯೋನೇ, ಯೆಹೋವನು ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು. ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು. ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
”ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು. ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು. ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ, ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು. ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
”ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
”ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು. ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು. ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು. ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು. ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು. ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.
”ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು. ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ. ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು. ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
”ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.
”ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ. ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
”ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆರಾಜ್ಯದ ಮಕ್ಕಳು. ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
”“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ. ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
”ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ. ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
”ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು. “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
”ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
”ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.
”“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು. ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು. ಇದಲ್ಲದೆರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
”“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ, ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ. ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ. ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ. ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
”ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ. ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ. ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
”“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
”“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ. ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ. ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ. “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು, ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು. ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು. ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
”ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು. ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು. “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
”ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು? ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು. ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ, ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
”“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು. ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
”“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
”ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. ಅದಕ್ಕೆ ಉತ್ತರವಾಗಿ ಅರಸನು,‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
”ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.
”ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
”ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.
”ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
”ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು. ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು,‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು. ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
”“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು. “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು, ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು, ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
”“ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ. “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ! ಆ ದಿನಗಳುಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ. ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
”“ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ. ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
”ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು. ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’ ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು. ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
”“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ. ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ. ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.” “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು. ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವುಎಚ್ಚರವಾಗಿರಿ,ಜಾಗರೂಕರಾಗಿರಿ. ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ. “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ! ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು. ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.
”ಯೇಸುವು “ಹೌದು ನಾನೇ! “ಇದಲ್ಲದೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.
”ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು. ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
”“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು. ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.
”ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
”ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ. ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
”ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
”ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು. ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು. ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು. ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
”ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು. ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
”ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು. ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.” “ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು. ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.
”ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
”ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
”ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು. ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
”“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು. ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.
”“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.
”ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ. ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. “ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು. ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.
”ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
”ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನುನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
”ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
”ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ. ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
”ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
”ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
”ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು. ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.
”ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
”ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ. ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
”ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.
”ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
”ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
”ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
”ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ. ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ. ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.
”ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
”ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. “ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.
”ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು. ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.
”ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ. ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ. ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು. ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು. ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು. ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
”ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ, ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ. ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ. ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
”ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ. ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು. ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು. ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ, ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ. ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.
”ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು. ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ, ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.
”ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ. ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ, ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
”ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ, ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು. ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು. ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
”ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
”ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
”“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ, ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
”ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ. ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು. ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ, ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.
”ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
”ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.
”ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
”ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
”ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ, “ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
”ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ. ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
”ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
”ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ. ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
”ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ. ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ. ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ. ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
”ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
”ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು, ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.
”ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
”ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
”ಸೈರಣೆಯಿಂದಿರಬೇಕೆಂಬನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ,ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ. ನಾನುಬೇಗನೇ ಬರುತ್ತೇನೆ,ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು. ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.
”ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ. ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.
”ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ,ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.
”ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು. ಆದರೆ ಆ ಸುರುಳಿಯನ್ನು ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ. ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ. ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು. ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ. ಈತನು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು. ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”
”ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು. ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು. ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.
”ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.
”ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.
”ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು. ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.
”ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ”! ಎನ್ನುವ ಶಬ್ದವನ್ನು ಕೇಳಿದೆನು. ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.
”ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು. ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು. ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.
”ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು. ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು. ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು. ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ. ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.
”ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು. ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
”ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ, ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ, ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ, ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.
”ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು, “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ. ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು. ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
”ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು. ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು. ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.
”ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.
”ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು. ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.
”ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.
”ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
”ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು. ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು. ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು. ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು.
”ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು. ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು. ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
”ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು. ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ, ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
”ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.
”ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು. ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.” ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು. ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.
”ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು. ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ. ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
”ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. ಅನಂತರ ಅವರಿಗೆ, “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು. ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು. ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ.
”ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು, “ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ. ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು. ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.
”ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು. ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು. ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು. ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು. ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.
”ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು. ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು. ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.
”ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು. ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು. ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು. ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು. ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು, ಸಮುದ್ರ ತೀರದ ಮರಳಿನ ಮೇಲೆ ನಿಂತನು.
”ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು. ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು. ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು. ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು. ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.
”ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು. ಕಿವಿಯುಳ್ಳವನು ಕೇಳಲಿ, ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.
”ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು. ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು. ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ, ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು. ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
”ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು. ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ. ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.
”ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು. ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು. ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
”ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು. ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
”ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
”ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
”ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು. ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು. ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
”ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು. ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು. ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು. ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.
”ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.
”ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು. ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”
”ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು. ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು. ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
”ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
”ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
”ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
”ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು. ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು. ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
”ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
”ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
”ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.
”ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು. ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು. “ಇಗೋಕಳ್ಳನು ಬರುವಂತೆ ಬರುತ್ತೇನೆ.ತಾನುಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.” ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.
”ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು. ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು. ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು. ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.
”ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು. ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು. ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು. ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.
”ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. “ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ. ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.
”ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.” ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು. ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು. ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು. ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ ಆಗಿದೆ.”
”ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು. ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು. ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.
”ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು. ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ. ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ. ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ. ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.
”“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು. “ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ, ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು. ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’ ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’ ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು, ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು. ಅನಂತರ ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’” ಎಂದು ಗೋಳಾಡುತ್ತಾ ದುಃಖಿಸುವರು. ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ. ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ. ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.
”ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು. “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.
”ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ, ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು. ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು. ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು. ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.
”ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು. ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ). ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು. ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.
”ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು. ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು. ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು. ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.
”ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ, ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.
”ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು. ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು. ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.
”ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು. ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.
”ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು. ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು. ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.
”ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು. ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು. ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು.
”ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
”ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು. ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
”ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.
”ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು. ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು. ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು. ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು. ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,
”ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು. ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು. ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ. ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ, ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
”ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ. ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು. ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು. ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ. ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
”“ನೋಡು! ನಾನು ಬೇಗನೇ ಬರುತ್ತೇನೆ.ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ.
”